ETV Bharat / bharat

ರಜೆಯ ನಂತರ 370ನೇ ವಿಧಿ ರದ್ದತಿ ವಿರುದ್ಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

author img

By

Published : Apr 25, 2022, 12:51 PM IST

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ..

SC on Article 370  abrogation of Article 370  SC agrees to hear against abrogation of Article 370  370ನೇ ವಿಧಿ ರದ್ದತಿ ವಿರುದ್ಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ  370ನೇ ವಿಧಿ ರದ್ದತಿ ವಿರುದ್ಧ ಅರ್ಜಿ ವಿಚಾರಣೆ  ಸುಪ್ರೀಂ ಕೋರ್ಟ್​ ಸುದ್ದಿ
ರಜೆಯ ನಂತರ 370ನೇ ವಿಧಿ ರದ್ದತಿ ವಿರುದ್ಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ಪಟ್ಟಿ ಮಾಡಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಅರ್ಜಿದಾರರಲ್ಲಿ ಒಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ಶೇಖರ್ ನಾಫಡೆ ಅವರ ಸಲ್ಲಿಕೆಗಳನ್ನು ಗಮನಿಸಿತು. ರಾಜ್ಯದಲ್ಲಿ ನಡೆಸಲಾಗುತ್ತಿರುವ ಡಿಲಿಮಿಟೇಶನ್ ಕಸರತ್ತಿನ ದೃಷ್ಟಿಯಿಂದ ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಓದಿ: ಕೃಷಿ ಕಾಯ್ದೆ ನಿಷೇಧ ಬೆನ್ನಲ್ಲೇ ಸಿಎಎ, ಆರ್ಟಿಕಲ್​​ 370 & ಯುಎಪಿಎ ಹಿಂಪಡೆದುಕೊಳ್ಳಲು ಹೆಚ್ಚಿದ ಒತ್ತಡ

ಇದು ಆರ್ಟಿಕಲ್ 370 ವಿಷಯವಾಗಿದೆ. ಡಿಲಿಮಿಟೇಶನ್ ಕೂಡ ನಡೆಯುತ್ತಿದೆ ಎಂದು ಹಿರಿಯ ವಕೀಲರು ತಿಳಿಸಿದ್ದಾರೆ. ಈ ಬಗ್ಗೆ ನೋಡೋಣ ಎಂದು ಸಿಜೆಐ ಹೇಳಿದರು. ಈ ಪ್ರಕರಣ ಐವರು ನ್ಯಾಯಾಧೀಶರ ವಿಷಯವಾಗಿದೆ. ನಾನು ಪೀಠವನ್ನು ಪುನರ್‌ ರಚಿಸಬೇಕಾಗಿದೆ. ಬೇಸಿಗೆ ರಜೆಯ ನಂತರ ಅರ್ಜಿಗಳನ್ನು ಆಲಿಸಲು ಮತ್ತು ಐವರು ನ್ಯಾಯಾಧೀಶರ ಪೀಠವನ್ನು ಮರು ರಚನೆ ಮಾಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ ಎಂದು ಸಿಜೆಐ ವಿಚಾರಣೆ ಮುಂದೂಡಿದರು.

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮೂಲಕ ಆರ್ಟಿಕಲ್ 370 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019ರ ನಿಬಂಧನೆಗಳನ್ನು ಕೇಂದ್ರ ರದ್ದುಗೊಳಿಸಿತ್ತು. ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು. 2019ರಲ್ಲಿ ಅಂದಿನ ಸಿಜೆಐ ರಂಜನ್ ಗೊಗೋಯ್ ಅವರು ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸಂವಿಧಾನ ಪೀಠಕ್ಕೆ ವರ್ಗಾಯಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.