ETV Bharat / bharat

ಹಿಜಾಬ್​ ವಿವಾದ.. ಸುಪ್ರೀಂಕೋರ್ಟ್​ನಿಂದ ಇಂದು ತೀರ್ಪು ಪ್ರಕಟ ಸಾಧ್ಯತೆ

author img

By

Published : Oct 12, 2022, 9:47 PM IST

Updated : Oct 13, 2022, 10:31 AM IST

ನ್ಯಾಯಮೂರ್ತಿ ಗುಪ್ತಾ ಅವರು ಅಕ್ಟೋಬರ್ 16 ರಂದು ನಿವೃತ್ತರಾಗಲಿರುವ ಕಾರಣ, ಹಿಜಾಬ್​ ಪ್ರಕರಣದ ತೀರ್ಪನ್ನು ಇಂದು ಪ್ರಕಟವಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 22 ರಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಕೊನೆಯ ದಿನದ ವಾದ - ಪ್ರತಿವಾದವನ್ನು ಪೀಠ ಆಲಿಸಿತ್ತು. ಸಂಪೂರ್ಣ ವಿಚಾರಣೆ ಬಳಿಕ ತೀರ್ಪನ್ನು ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಿದ್ದರು.

http://10.10.50.90//IANS_ENGLISH/08-September-2022/6511d8d756493347bfca1402d5d3d78e_0809a_1662648410_970.jpg
ಸುಪ್ರೀಂಕೋರ್ಟ್​ನಿಂದ ನಾಳೆಯೇ ಹಿಜಾಬ್​ ತೀರ್ಪು ಪ್ರಕಟ ಸಾಧ್ಯತೆ!

ನವದೆಹಲಿ: ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ನಿಷೇಧಿಸಿ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸುವ ಸಾಧ್ಯತೆಯಿದೆ.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ಪೀಠ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರೊಂದಿಗೆ ಅಂತಿಮ ತೀರ್ಪು ಪ್ರಕಟಿಸಲಿದೆ. ಪೀಠದ ನೇತೃತ್ವ ವಹಿಸಿದ್ದ ನ್ಯಾ. ಗುಪ್ತಾ ಅವರು ಅಕ್ಟೋಬರ್ 16 ರಂದು ನಿವೃತ್ತರಾಗಲಿರುವ ಕಾರಣ ಇಂದು ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 22 ರಂದು ಪ್ರಕರಣದ ಕೊನೆಯ ದಿನದ ವಿಚಾರಣೆ ನಡೆದು, ವಾದ - ಪ್ರತಿವಾದ ಪೂರ್ಣಗೊಂಡ ಬಳಿಕ ದ್ವಿಸದಸ್ಯ ಪೀಠ ತನ್ನ ತೀರ್ಪು ಕಾಯ್ದಿರಿಸಿತ್ತು.

ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಕರ್ನಾಟಕ ಹೈಕೋರ್ಟ್​ ನೀಡಿದ ತೀರ್ಪನ್ನು ತಡೆ ಹಿಡಿಯುವಂತೆ ಕೋರಲಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದಿದ್ದರೆ ಅವರು ಶಾಲೆಗೆ ತೆರಳದೇ ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಹೀಗಾಗಿ ಶಾಲೆಯಲ್ಲೂ ಹಿಜಾಬ್​ ಧರಿಸಲು ಅವಕಾಶ ನೀಡಬೇಕು ಎಂದು ಫಿರ್ಯಾದುದಾರರ ಪರ ವಕೀಲರು ವಾದ ಮಂಡಿಸಿದ್ದರು. ಇದಲ್ಲದೇ ಈ ಬಿಕ್ಕಟ್ಟನ್ನು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು ಎಂದು ವಾದಿಸಿದ್ದರು.

ಮತ್ತೊಂದೆಡೆ, ರಾಜ್ಯದ ಪರ ವಾದ ಮಂಡಿಸಿದ್ದ ವಕೀಲರು, ಹಿಜಾಬ್​ ಧರಿಸುವುದರಿಂದ ಶಾಲಾ ಕಾಲೇಜುಗಳಲ್ಲಿ ಉಂಟಾಗುವ ಧಾರ್ಮಿಕ ಬಿಕ್ಕಟ್ಟು ನಿವಾರಣೆಗೆ ಸರ್ಕಾರ ಈ ಆದೇಶ ಹೊರಡಿಸಿತ್ತು. ಹಿಜಾಬ್​ ಧರಿಸುವುದು ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್​ ತೀರ್ಪು ನೀಡಿದೆ. ವಿದ್ಯಾರ್ಥಿಗಳಲ್ಲಿ ಸಮಾನತೆ ತರುವ ದೃಷ್ಟಿಯಿಂದ ಸಮವಸ್ತ್ರ ಕಡ್ಡಾಯ ಮಾಡಿ, ಶಾಲಾ ಕಾಲೇಜುಗಳ ತರಗತಿಯೊಳಗೆ ಮಾತ್ರ ಹಿಜಾಬ್​ ನಿಷೇಧಿಸಲಾಗಿದೆ ಎಂದು ವಾದ ಮಂಡಿಸಿದ್ದರು.

ಇದನ್ನು ಓದಿ.. ಮೇಲಧಿಕಾರಿಗಳ ಒತ್ತಡ ಆರೋಪ.. ಬ್ಯಾಂಕ್​ ಮ್ಯಾನೇಜರ್ ಆತ್ಮಹತ್ಯೆ

Last Updated : Oct 13, 2022, 10:31 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.