ETV Bharat / bharat

ಲಖಿಂಪುರ ಹಿಂಸಾಚಾರ ಪ್ರಕರಣ : ಇಂದು ಸುಪ್ರೀಂಕೋರ್ಟ್​​ನಲ್ಲಿ​​ ವಿಚಾರಣೆ

author img

By

Published : Oct 20, 2021, 5:50 AM IST

Updated : Oct 20, 2021, 6:07 AM IST

SC to hear Lakhimpur Kheri violence case today
ಲಖಿಂಪುರ ಹಿಂಸಾಚಾರ ಪ್ರಕರಣ : ಇಂದು ಸುಪ್ರೀಂಕೋರ್ಟ್​​ ವಿಚಾರಣೆ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣವನ್ನು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ತನಿಖೆಗೆ ಒಪ್ಪಿಸುವ ಕುರಿತಂತೆ ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ.

ನವದೆಹಲಿ: ದೇಶಾದ್ಯಂತ ಸಾಕಷ್ಟು ಅಸಮಾಧಾನ ಹುಟ್ಟುಹಾಕಿದ್ದ ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ.

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರಿರುವ ಪೀಠ ವಿಚಾರಣೆ ನಡೆಸಲಿದೆ. ಪ್ರಕರಣವನ್ನು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಮತ್ತು ಸಿಬಿಐ ತನಿಖೆಗೆ ಆಗ್ರಹಿಸಿ ಇಬ್ಬರು ವಕೀಲರು ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಈ ವಿಚಾರಣೆ ನಡೆಯಲಿದೆ.

ಈ ಮೊದಲು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆದಷ್ಟು ಶೀಘ್ರವಾಗಿ ಸಂಪೂರ್ಣ ವರದಿ ನೀಡುವಂತೆ ತಾಕೀತು ಮಾಡಿತ್ತು.

ಅಕ್ಟೋಬರ್ 3ರಂದು ನಡೆದಿದ್ದ ಈ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ: 5ಕ್ಕೆ ಏರಿದ ಸಾವಿನ ಸಂಖ್ಯೆ

Last Updated :Oct 20, 2021, 6:07 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.