ETV Bharat / bharat

ಪೂರ್ವ ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಮೂವರು ಸಾವು, ಏಳು ಮಂದಿಗೆ ಗಾಯ

author img

By

Published : May 16, 2023, 3:08 PM IST

Updated : May 16, 2023, 4:19 PM IST

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ಎಗ್ರಾ (ಪಶ್ಚಿಮ ಬಂಗಾಳ) : ಇಲ್ಲಿನ ಪೂರ್ವ ಮಿಡ್ನಾಪುರದ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೂವರು ಪ್ರಾಣ ಕಳೆದುಕೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಡಿಕುಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಪೂರ್ವ ಮಿಡ್ನಾಪುರದ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ಕೆ ಮಾಧ್ಯಮಗೋಷ್ಟಿ ನಡೆಸಿ ಟೋಲ್ ಮತ್ತು ಗಾಯದ ವಿವರಗಳನ್ನು ಹಂಚಿಕೊಂಡರು.

ಸ್ಫೋಟದ ಸದ್ದಿಗೆ ಇಡೀ ಪ್ರದೇಶ ತತ್ತರಿಸಿದೆ. ಇಡೀ ಪ್ರದೇಶದಲ್ಲಿ ಹಲವಾರು ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ಅಲ್ಲದೇ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಸಾವು ನೋವುಗಳ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ. ಪೂರ್ವ ಮೇದಿನಿಪುರ ಜಿಲ್ಲೆಯ ಎಗ್ರಾ ಬ್ಲಾಕ್ ನಂಬರ್ ಒಂದರ ಸಹಾರಾ ಗ್ರಾಮ ಪಂಚಾಯತ್ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಢಾಕಾದ ಏಳಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಫೋಟ: 17 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

"ಪೂರ್ವ ಮೇದಿನಿಪುರದ ಎಗ್ರಾ ಬ್ಲಾಕ್‌ನಲ್ಲಿ ಬೃಹತ್ ಬಾಂಬ್ ಸ್ಫೋಟ ಸಂಭವಿಸಿದೆ. ಇದರಲ್ಲಿ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಬಾಂಬ್‌ಗಳನ್ನು ತಯಾರಿಸುತ್ತಿದ್ದ ಟಿಎಂಸಿ ನಾಯಕನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಇದು ಡಬ್ಲ್ಯುಬಿಯಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಗಂಭೀರ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಹುಟ್ಟುಹಾಕುತ್ತದೆ" ಎಂದು ಮಜುಂದಾರ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ದೀಪಾವಳಿ ಹೊಸ್ತಿಲಲ್ಲಿ ನಾಲ್ಕು ಕುಟುಂಬದಲ್ಲಿ ಕತ್ತಲು

ಘಟನೆಯ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುವಂತೆ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷರು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ದೊಡ್ಡ ಶಬ್ದದಿಂದ ಇಡೀ ಗ್ರಾಮ ತತ್ತರಿಸಿ ಹೋಗಿತ್ತು. ಇಲ್ಲಿಯವರೆಗೆ, ಎರಡು ಸುಟ್ಟ ಮೃತದೇಹಗಳು ಪ್ರದೇಶದ ಪಕ್ಕದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳದಿಂದ ಹಲವಾರು ಜನರನ್ನು ರಕ್ಷಿಸಿ ಎಗ್ರಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಲು ಪ್ರದೇಶವನ್ನು ಸುತ್ತುವರಿದಿದ್ದಾರೆ. ಅಗ್ನಿಶಾಮಕ ವಾಹನ ಕೂಡ ಧಾವಿಸಿ ಬೆಂಕಿ ನಂದಿಸಿದೆ.

ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೇಹಗಳು: ಮಧ್ಯಾಹ್ನದ ವೇಳೆ ಏಕಾಏಕಿ ಭಾರಿ ಸದ್ದು ಕೇಳಿಸಿತ್ತಾದರೂ ಏನಾಯಿತು ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಎಲ್ಲರೂ ತಮ್ಮ ಮನೆಗಳಿಂದ ಹೊರಗೆ ಬಂದು ನೋಡಿದಾಗ ಸುತ್ತಮುತ್ತಲೆಲ್ಲಾ ಸ್ಮಶಾನವಾಗಿ ಮಾರ್ಪಟ್ಟಿತ್ತು. ಸುತ್ತಲೂ ಅವಶೇಷಗಳಿಂದ ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಈ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಬರಲು ತಡಮಾಡಿದ್ದಕ್ಕೆ ಸ್ಥಳೀಯರು ಸಿಬ್ಬಂದಿಯೊಂದಿಗೆ ವಾಗ್ವಾದವನ್ನೂ ನಡೆಸಿದರು.

ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐವರು ಬಲಿ, 14 ಮಂದಿಗೆ ಗಾಯ

Last Updated :May 16, 2023, 4:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.