ETV Bharat / bharat

ಭೀಕರ ರಸ್ತೆ ಅಪಘಾತ: ಮದುವೆ ಸಮಾರಂಭದಿಂದ ಬರುತ್ತಿದ್ದ ಆರು ಮಂದಿ ದುರ್ಮರಣ

author img

By ETV Bharat Karnataka Team

Published : Dec 16, 2023, 12:32 PM IST

Six killed in Road Accident in Nagpur: ಕ್ವಾಲಿಸ್​ ಕಾರು ಮತ್ತು ಟ್ರಕ್​ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

Six killed, one critical as car collides with truck in Nagpur
ಭೀಕರ ರಸ್ತೆ ಅಪಘಾತ: ಮದುವೆ ಸಮಾರಂಭದಿಂದ ಬರುತ್ತಿದ್ದ ಆರು ಮಂದಿ ದುರ್ಮರಣ

ನಾಗ್ಪುರ (ಮಹಾರಾಷ್ಟ್ರ): ಕ್ವಾಲಿಸ್​ ಕಾರು ಮತ್ತು ಟ್ರಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ. ಮದುವೆ ಸಮಾರಂಭದಿಂದ ಹಿಂತಿರುಗುತ್ತಿರುವಾಗ ಈ ದುರಂತ ನಡೆದಿದೆ.

ಮೃತರನ್ನು ಮಯೂರ್ ಇಂಗಳೆ (22), ವೈಭವ್ ಚಿಖಲೆ (32), ಸುಧಾಕರ್​ ಮಾನಕರ್​ (42), ವಿಠ್ಠಲ್ ತೋಟೆ (45), ಅಜಯ್ ಚಿಖಲೆ (40) ಮತ್ತು ರಮೇಶ ಹಲೊಂಡೆ ಎಂದು ಗುರುತಿಸಲಾಗಿದೆ. ಜಗದೀಶ್ ಧೋನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ನಾಗ್ಪುರ ಜಿಲ್ಲೆಯ ಕಟೋಲ್ ತಾಲೂಕಿನ ಮೆಂಡಿಪಥರ್ ಗ್ರಾಮದವರು ಎಂದು ತಿಳಿದು ಬಂದಿದೆ.

ನಾಗ್ಪುರದಿಂದ ಕಟೋಲ್ ಕಡೆಗೆ ಹೋಗುತ್ತಿದ್ದಾಗ ಸೋಂಖಾಂಬ್ ಮತ್ತು ತಾರಾಬೋಡಿ ಗ್ರಾಮಗಳ ಮಧ್ಯೆ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ, ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಆಸ್ಪತ್ರೆಗೆ ಸಾಗಿದ್ದಾರೆ. ಇದರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ನಾಗ್ಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಜಗದೀಶ್​ನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಟ್ರಕ್ ಚಾಲಕನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್​-ಆಟೋ ಮಧ್ಯೆ ಅಪಘಾತ; ಐವರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.