ETV Bharat / bharat

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ

author img

By

Published : Mar 3, 2023, 5:37 PM IST

ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಕಾಂಗ್ರೆಸ್​ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

sonia-gandhi-admitted-to-ganga-ram-hospital-
ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಯುಪಿಎ ಅಧ್ಯಕ್ಷೆ, ಕಾಂಗ್ರೆಸ್​ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

  • Heard about Smt. Sonia Gandhi getting hospitalised today due to fever.

    My good wishes for her speedy recovery and health!

    — DK Shivakumar (@DKShivakumar) March 3, 2023 " class="align-text-top noRightClick twitterSection" data=" ">

ಹಿರಿಯ ರಾಜಕಾರಣಿ ಸೋನಿಯಾ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಸರ್ ಗಂಗಾರಾಮ್ ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷರಾದ ಡಾ.ಡಿ.ಎಸ್.ರಾಣಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ''ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಾರ್ಚ್ 2ರಂದು ಆಸ್ಪತ್ರೆಗೆ ದಾಖಿಸಲಾಗಿದೆ. ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ವೈದ್ಯ ಡಾ.ಅರೂಪ್ ಬಸು ಮತ್ತು ಅವರ ತಂಡವು ಚಿಕಿತ್ಸೆ ನೀಡುತ್ತಿದೆ. ಆರೋಗ್ಯಕ್ಕೆ ಸಂಬಂಧಿಸಿಂದ ತಪಾಸಣೆ ನಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ'' ಎಂದು ತಿಳಿಸಿದ್ದಾರೆ.

ಕಾಂಗ್ರೆಸ್​ ಪಕ್ಷದ ಮಾಜಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್​ ಮಾಡಿದ್ದಾರೆ. ಜ್ವರದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಹಾರೈಸುತ್ತೇನೆ ಎಂದು ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಛತ್ತೀಸ್​​ಗಢದ ರಾಯಪುರದಲ್ಲಿ ಫೆ.24ರಿಂದ 26ರವರೆಗೆ ನಡೆದ ಕಾಂಗ್ರೆಸ್​ ಮಹಾ ಅಧಿವೇಶನದಲ್ಲಿ ಸೋನಿಯಾ ಗಾಂಧಿ ಪಾಲ್ಗೊಂಡಿದ್ದರು. ಪಕ್ಷದ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಸೋನಿಯಾ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಈ ವರ್ಷದ ಮೂರು ತಿಂಗಳ ಅವಧಿಯಲ್ಲಿ ಕಾಂಗ್ರೆಸ್ ನಾಯಕಿ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಎರಡನೇ ಸಲ ವಕ್ಕರಿಸಿದ ಕೊರೊನಾ

ಕಳೆದ ಜನವರಿಯಲ್ಲಿ ಸೋನಿಯಾ ಗಾಂಧಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೊದಲ ವಾರದಲ್ಲಿ ಉಸಿರಾಟದ ಸೋಂಕಿನಿಂದ ಗಂಗಾರಾಮ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆಗಲೂ ಕೂಡ ಸೋನಿಯಾ ಅವರನ್ನು ಚೆಸ್ಟ್ ವೈದ್ಯಕೀಯ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಡಾ.ಅರೂಪ್ ಬಸು ಮತ್ತವರ ತಂಡ ಆರೋಗ್ಯದ ಮೇಲೆ ನಿಗಾ ವಹಿಸಿತ್ತು. ಇದೇ ಸಮಯದಲ್ಲಿ ಭಾರತ ಜೋಡೋ ಯಾತ್ರೆ ನಡೆಸುತ್ತಿದ್ದ ಪುತ್ರ ರಾಹುಲ್​ ಗಾಂಧಿ, ತಮ್ಮ ಅಮ್ಮನ ಆರೋಗ್ಯ ವಿಚಾರಣೆಗಾಗಿ ಹರಿಯಾಣದಿಂದ ದೆಹಲಿಗೆ ತೆರಳಿದ್ದರು.

2 ಬಾರಿ ಕೋವಿಡ್ ಸೋಂಕು ದೃಢಪಟ್ಟಿತ್ತು​: 2022ರಲ್ಲಿ ಸೋನಿಯಾ ಗಾಂಧಿ ಅವರಿಗೆ ಎರಡು ಬಾರಿ ಕೋವಿಡ್​​ ಸೋಂಕು ಕಾಣಿಸಿಕೊಂಡಿತ್ತು. ಜೂನ್​ ತಿಂಗಳಲ್ಲಿ ಮೊದಲ ಬಾರಿಗೆ ಕೋವಿಡ್​ ಪಾಸಿಟಿವ್​ ಪತ್ತೆಯಾಗಿತ್ತು. ನಂತರ ಆಗಸ್ಟ್​ನಲ್ಲೂ ಎರಡನೇ ಬಾರಿಗೆ ಸೋನಿಯಾಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದರ ಬಳಿಕ ಕೋವಿಡ್​ ನಂತರದ ಸಮಸ್ಯೆಗಳು ಸೋನಿಯಾ ಗಾಂಧಿಗೆ ಕಾಡುತ್ತಿವೆ. ಇನ್ನು, ಸರ್ ಗಂಗಾರಾಮ್ ಆಸ್ಪತ್ರೆಯು ದೆಹಲಿಯ ಪ್ರಮುಖ ವೈದ್ಯಕೀಯ ಸಂಸ್ಥೆಯಾಗಿದೆ. ಅತ್ಯಾಧುನಿಕ ಸೌಲಭ್ಯಗಳು ಮತ್ತು ಅನುಭವಿ ವೈದ್ಯಕೀಯ ಸಿಬ್ಬಂದಿಯನ್ನು ಇದು ಹೊಂದಿದೆ. ಬ್ರಾಂಕೈಟಿಸ್‌ನಂತಹ ಉಸಿರಾಟದ ಕಾಯಿಲೆಗಳು ಸೇರಿದಂತೆ ಗಂಭೀರ ಮತ್ತು ಕಠಿಣ ವೈದ್ಯಕೀಯ ಪರಿಸ್ಥಿತಿಗಳನ್ನು ನಿರ್ವಹಿಸಲು ಆಸ್ಪತ್ರೆಯು ನುರಿತ ವೈದ್ಯರು ಮತ್ತು ತಜ್ಞರ ತಂಡವನ್ನು ಹೊಂದಿದೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್​ ಕೊನೆಗೊಂಡಿದ್ದಕ್ಕೆ ಸಂತೋಷ: ನಿವೃತ್ತಿ ಸುಳಿವು ಕೊಟ್ರಾ ಸೋನಿಯಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.