ETV Bharat / bharat

UP Election: ಎಸ್​ಪಿ-ಆರ್​ಎಲ್​ಡಿ ಮೈತ್ರಿ ಘೋಷಣೆ, ಒಟ್ಟಿಗೆ ಸ್ಪರ್ಧಿಸಲು ನಿರ್ಧಾರ

author img

By

Published : Dec 8, 2021, 5:16 AM IST

ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿ ನಡೆದಿದೆ. ಮೀರತ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಎರಡೂ ಪಕ್ಷಗಳ ಮುಖಂಡರು ಒಟ್ಟಿಗೆ ವೇದಿಕೆ ಹಂಚಿಕೊಂಡು ಮೈತ್ರಿ ಖಚಿತಪಡಿಸಿದ್ದಾರೆ.

Uttar Pradesh assembly polls
ಎಸ್​ಪಿ-ಆರ್​ಎಲ್​ಡಿ ಮೈತ್ರಿ

ಮೀರತ್(ಉತ್ತರಪ್ರದೇಶ) : ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿ ಮಾಡಿಕೊಂಡಿವೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘೋಷಿಸಿದ್ದಾರೆ. ಅಲ್ಲದೆ ಎರಡೂ ಪಕ್ಷಗಳ ಮುಖಂಡರು ಮೀರತ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಒಟ್ಟಿಗೆ ವೇದಿಕೆ ಹಂಚಿಕೊಂಡರು.

UP Election 2022: ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸರ್ಕಾರವು ರೈತರಿಗೆ ಎಲ್ಲಾ ರೀತಿಯ ಹಕ್ಕುಗಳನ್ನು ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ. ಆರ್‌ಎಲ್‌ಡಿ ಅಧ್ಯಕ್ಷ ಜಯಂತ್ ಚೌಧರಿ ಅವರು ಅಧಿಕಾರಕ್ಕೆ ಬಂದ ನಂತರ ತಾವು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಸ್ಮಾರಕವನ್ನು ನಿರ್ಮಿಸುವುದಾಗಿ ಹೇಳಿದರು. ಬಿಜೆಪಿ ನಾಯಕರು ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ ಅಖಿಲೇಶ್, ಎಸ್‌ಪಿ ಮತ್ತು ಆರ್‌ಎಲ್‌ಡಿ ಕಾರ್ಯಕರ್ತರ ಸಹೋದರತ್ವವನ್ನು ಬಲಪಡಿಸುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಆಡಳಿತದಲ್ಲಿ ಗೊಬ್ಬರ, ಔಷಧಿ, ಆಕ್ಸಿಜನ್ ಬೆಡ್​​ಗಾಗಿ ಜನರು ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ನೋಟು ರದ್ಧತಿ ಸಂದರ್ಭದಲ್ಲೂ ಜನ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ ಈ ಬಾರಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಜನ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಬಿಜೆಪಿಯ ದ್ವೇಷ ರಾಜಕಾರಣವನ್ನು ತಿರಸ್ಕರಿಸುತ್ತೇವೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುಡುಗಿದರು.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್, ಆರ್‌ಎಲ್‌ಡಿ ಸಂಸ್ಥಾಪಕ ಅಜಿತ್ ಸಿಂಗ್ ಅವರ ಪರಂಪರೆಯನ್ನು ಕಾಪಾಡಲು ನಮ್ಮ ಮೈತ್ರಿಗೆ ಮತ ನೀಡುವಂತೆ RLD ಮುಖ್ಯಸ್ಥ ಜಯಂತ್ ಸಿಂಗ್ ಚೌಧರಿ ಇದೇ ವೇಳೆ ಮನವಿ ಮಾಡಿದರು.

ಇನ್ನೊಂದೆಡೆ ಮುಂಬರುವ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಎಸ್‌ಪಿ ಮತ್ತು ಕಾಂಗ್ರೆಸ್ ಜೊತೆ ಮಾತುಕತೆ ನಡೆಸುವುದಾಗಿ ಲೋಕತಾಂತ್ರಿಕ ಜನತಾ ದಳ (ಎಲ್‌ಜೆಡಿ) ಮಂಗಳವಾರ ಪ್ರಕಟಿಸಿದೆ. ತಮ್ಮ ಹಿಡಿತದಲ್ಲಿರುವ 19 ಜಿಲ್ಲೆಗಳ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದೆ. ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಶ್ಚಿಮ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿನ ಮೈತ್ರಿಯು ಬಿಜೆಪಿಗೆ ತೀವ್ರ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಸಿಪಿಎಂ, ಸಿಪಿಐ ಮತ್ತು ಫಾರ್ವರ್ಡ್ ಬ್ಲಾಕ್ ಪಕ್ಷಗಳೊಂದಿಗೆ ಪ್ರಾಥಮಿಕ ಮಾತುಕತೆ ನಡೆಯುತ್ತಿದೆ. ಇನ್ನಷ್ಟು ಪಕ್ಷಗಳು ಮೈತ್ರಿಗೆ ಸೇರುವ ಸಾಧ್ಯತೆ ಇದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಾವೇದ್ ರಜಾ ಮತ್ತು ರಾಜ್ಯಸಭಾ ಸದಸ್ಯ ಎಂವಿ ಶ್ರೇಯಮ್ಸ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ ಕಣಕ್ಕಿಳಿಯದ ಕಾಂಗ್ರೆಸ್​​ ಹಾಲಿ ಸದಸ್ಯರ ಮುಂದಿನ ಭವಿಷ್ಯವೇನು?!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.