ETV Bharat / bharat

ಶ್ರೀಲಂಕಾಕ್ಕೆ ಪರಿಹಾರ ಸಾಮಗ್ರಿ: ಪ್ರಧಾನಿ ಬಳಿ ತಮಿಳುನಾಡು ಸಿಎಂ​ ಪ್ರಸ್ತಾವ

author img

By

Published : Mar 31, 2022, 5:46 PM IST

ತಮಿಳುನಾಡು ಸಿಎಂ ಹಾಗು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್​ ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದು ಇಂದು ಪ್ರಧಾನಿ ಮೋದಿ ಭೇಟಿ ಮಾಡಿ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿದರು. ಇದೇ ವೇಳೆ, ಪರಿಹಾರ ಸಾಮಗ್ರಿ ರವಾನಿಸುವ ಕುರಿತಾಗಿ ಪ್ರಸ್ತಾವನೆ ಮುಂದಿಟ್ಟರು.

ಪ್ರಧಾನಿ ಮೋದಿ- ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಭೇಟಿ
PM Modi - CM MK Stalin Meet

ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ನೆರೆಯ ಶ್ರೀಲಂಕಾ ದೇಶಕ್ಕೆ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನಿಸುವ ಕುರಿತಾಗಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಪ್ರಧಾನಿ ನರೇಂದ್ರ ಮೋದಿ ಮುಂದೆ ಪ್ರಸ್ತಾವವನ್ನಿಟ್ಟಿದ್ದಾರೆ.

ಡಿಎಂಕೆ ಅಧ್ಯಕ್ಷರೂ ಆಗಿರುವ ಎಂ.ಕೆ.ಸ್ಟಾಲಿನ್​ ಮೂರು ದಿನಗಳ ದೆಹಲಿ ಪ್ರವಾಸದಲ್ಲಿ ಇದ್ದಾರೆ. ಗುರುವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಶ್ರೀಲಂಕಾದ ಆರ್ಥಿಕ ಸಂಕಷ್ಟದ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ, ತಮಿಳುನಾಡಿನಿಂದ ಶ್ರೀಲಂಕಾಕ್ಕೆ ಆಹಾರ ಮತ್ತು ವೈದ್ಯಕೀಯ ಸಾಮಗ್ರಿಗಳ ರವಾನಿಸುವ ಬಗ್ಗೆ ಪ್ರಸ್ತಾವನೆ ಮುಂದಿಟ್ಟರು ಎಂದು ವರದಿಯಾಗಿದೆ.

ಇದಾದ ಬಳಿಕ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರನ್ನು ತಮಿಳುನಾಡು ಸಿಎಂ ಭೇಟಿಯಾದರು. ಗೃಹ ಸಚಿವ ಅಮಿತ್​ ಶಾ ಅವರನ್ನೂ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಬುಧವಾರ ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸ್ಟಾಲಿನ್​ ಭೇಟಿ ಮಾಡಿದ್ದರು.

ಏ.2ಕ್ಕೆ ಪಕ್ಷದ ಕಚೇರಿ ಉದ್ಘಾಟನೆ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡಿಎಂಕೆಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಏ.2ರಂದು ನಡೆಯಲಿದೆ. ದೀನ್​ದಯಾಳ್​ ಉಪಾಧ್ಯಾಯ ಮಾರ್ಗದಲ್ಲಿ ಕಚೇರಿ ಇದ್ದು, ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿ ರಾಷ್ಟ್ರೀಯ ನಾಯಕರನ್ನು ಆಮಂತ್ರಿಸಲಾಗುತ್ತಿದೆ.

ಇದನ್ನೂ ಓದಿ: 'ದೇಶದ ಅತಿದೊಡ್ಡ ಪಕ್ಷವೇ ಗೂಂಡಾಗಿರಿಯಲ್ಲಿ ತೊಡಗಿದರೆ, ಜನರಿಗೆ ತಪ್ಪು ಸಂದೇಶ ರವಾನೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.