ETV Bharat / bharat

Skin To Skin Contact: 'ಚರ್ಮದಿಂದ ಚರ್ಮ ಸ್ಪರ್ಶವಿಲ್ಲದಿದ್ರೆ ಲೈಂಗಿಕ ದೌರ್ಜನ್ಯವಲ್ಲ' ಎಂಬ ಬಾಂಬೆ ಹೈಕೋರ್ಟ್​ ತೀರ್ಪು ರದ್ದುಗೊಳಿಸಿದ ಸುಪ್ರೀಂ

author img

By

Published : Nov 18, 2021, 12:47 PM IST

"ಒಬ್ಬ ಅಪ್ರಾಪ್ತೆ ಬಟ್ಟೆ ಧರಿಸಿಕೊಂಡಿದ್ದಾಗ ಆಕೆಯ ಎದೆಯನ್ನು ಯಾರಾದರೂ ಮುಟ್ಟಿದರೆ ಅಥವಾ ಅವರ ಕೈ ಎದೆಗೆ ತಾಗಿದ ತಕ್ಷಣ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದ ಆರೋಪಿಯನ್ನು ದೋಷಮುಕ್ತಗೊಳಿಸಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಬಾಂಬೆ ಹೈಕೋರ್ಟ್​ ತೀರ್ಪು ರದ್ದುಗೊಳಿಸಿದ ಸುಪ್ರೀಂ
ಬಾಂಬೆ ಹೈಕೋರ್ಟ್​ ತೀರ್ಪು ರದ್ದುಗೊಳಿಸಿದ ಸುಪ್ರೀಂ

ನವದೆಹಲಿ: 'ಇಬ್ಬರ ಮಧ್ಯೆ ಚರ್ಮದಿಂದ ಚರ್ಮ ಸ್ಪರ್ಶವಾಗದಿದ್ದರೆ (Skin To Skin Contact) ಅದು ಲೈಂಗಿಕ ದೌರ್ಜನ್ಯ (sexual assault) ಆಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿದ್ದ ವಿವಾದಾತ್ಮಕ ತೀರ್ಪನ್ನು (Controversial judgment of the Bombay High Court) ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

ಕಳೆದ ಜನವರಿ 19ರಂದು ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್​ನ ನಾಗ್ಪುರ ಪೀಠ​ವು, ಒಬ್ಬ ಅಪ್ರಾಪ್ತೆ ಬಟ್ಟೆ ಧರಿಸಿಕೊಂಡಿದ್ದಾಗ ಆಕೆಯ ಎದೆಯನ್ನು ಯಾರಾದರೂ ಮುಟ್ಟಿದರೆ ಅಥವಾ ಅವರ ಕೈ ಎದೆಗೆ ತಾಗಿದ ತಕ್ಷಣ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆತ ಅಪ್ರಾಪ್ತೆ ಧರಿಸಿದ್ದ ಬಟ್ಟೆಯನ್ನು ತೆಗೆದು ಸ್ಪರ್ಶಿಸಿದರೆ ಅಥವಾ ಬಟ್ಟೆಯೊಳಗಿಂದ ಕೈ ಹಾಕಿದರೆ ಅದನ್ನು ಲೈಂಗಿಕ ದೌರ್ಜನ್ಯ ಎನ್ನಬಹುದು ಎಂದು ತೀರ್ಪು ನೀಡಿ ಆರೋಪಿಯನ್ನು ದೋಷಮುಕ್ತಗೊಳಿಸಿತ್ತು.

ಇದನ್ನೂ ಓದಿ: ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಸ್ಪರ್ಶಿಸಿದರೆ ಅದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್​

ಈ ತೀರ್ಪಿನ ವಿರುದ್ಧ ಭಾರತದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ (Attorney General of India KK Venugopal), ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಮಹಾರಾಷ್ಟ್ರ ರಾಜ್ಯವು ಹೈಕೋರ್ಟ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿಗಳನ್ನು ಸಲ್ಲಿಸಿದ್ದವು. ಬಳಿಕ ಬಾಂಬೆ ಹೈಕೋರ್ಟ್​ ತೀರ್ಪನ್ನು ಸುಪ್ರೀಂಕೋರ್ಟ್​ ತಡೆಹಿಡಿದಿತ್ತು.

ಈ ಸಂಬಂಧ ಇಂದು ವಿಚಾರಣೆ ನಡೆಸಿದ ನ್ಯಾ. ಉದಯ್ ಉಮೇಶ್ ಲಲಿತ್, ನ್ಯಾ. ಎಸ್ ರವೀಂದ್ರ ಭಟ್ ಮತ್ತು ನ್ಯಾ. ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು, ಪೋಕ್ಸೋ ಕಾಯ್ದೆ ಇರುವುದು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ. ಲೈಂಗಿಕ ದೌರ್ಜನ್ಯ ಎಸಗಲು ಚರ್ಮದಿಂದ ಚರ್ಮದ ಸ್ಪರ್ಶವೇ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು, ಬಾಂಬೆ ಹೈಕೋರ್ಟ್‌ನ ತೀರ್ಪನ್ನು ರದ್ದುಗೊಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.