ETV Bharat / bharat

ಹಣದೊಂದಿಗೆ ಸಿಕ್ಕಿಬಿದ್ದ ಜಾರ್ಖಂಡ್​ನ ಮೂವರು ಕಾಂಗ್ರೆಸ್​ ಶಾಸಕರು ಅಮಾನತು

author img

By

Published : Jul 31, 2022, 2:12 PM IST

ಭಾರಿ ಮೊತ್ತದ ಹಣವನ್ನು ಸಾಗಿಸಿ ಸಿಕ್ಕಿ ಬಿದ್ದಿದ್ದ ಮೂವರು ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

Suspend of three Congress MLAs
ಮೂವರು ಕಾಂಗ್ರೆಸ್​ ಶಾಸಕರ ಅಮಾನತು

ನವದೆಹಲಿ: ಪಶ್ಚಿಮ ಬಂಗಾಳದ ಹೌರಾದಲ್ಲಿ ಭಾರಿ ಮೊತ್ತದ ಹಣದೊಂದಿಗೆ ಸಿಕ್ಕಿಬಿದ್ದ ಜಾರ್ಖಂಡ್‌ನ ಮೂವರು ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿದೆ. ಅಲ್ಲದೇ, ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಾರ್ಖಂಡ್ ಉಸ್ತುವಾರಿ ಅವಿನಾಶ್ ಪಾಂಡೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂವರು ಶಾಸಕರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿಸಿದರು.

ನಿನ್ನೆ ಭಾರಿ ಮೊತ್ತದ ಹಣವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿಕೊಂಡು ಹೋಗುತ್ತಿದ್ದ ಕಾಂಗ್ರೆಸ್​ ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್ ಕಚ್ಚಪ್ ಮತ್ತು ನಮನ್ ಬಿಕ್ಸಲ್ ಕೊಂಗಾರಿ ಅವರನ್ನು ಪೊಲೀಸರು ತಡೆದು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿತ್ತು. ಭಾರಿ ಪ್ರಮಾಣದ ಹಣವನ್ನು ಶಾಸಕರು ಸಾಗಿಸುತ್ತಿದ್ದಾರೆ ಎಂಬ ಬಗ್ಗೆ ಪೊಲೀಸ್​ ಇಲಾಖೆಗೆ ಮಾಹಿತಿ ದೊರೆತಿತ್ತು. ಹೀಗಾಗಿ ಕಾರನ್ನು ರಸ್ತೆಯಲ್ಲಿ ತಡೆದು ತಪಾಸಣೆ ನಡೆಸಿದಾಗ ಹಣ ದೊರಕಿತ್ತು.

ಇದನ್ನೂ ಓದಿ: ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಗುಂಡೇಟಿಗೆ ಬಲಿಯಾದ ಸೇನಾ ಶ್ವಾನ; ಅಂತಿಮ ವಿದಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.