ETV Bharat / bharat

ಸಿಬಿಐ ತನಿಖೆಗೂ ಮುನ್ನ ತಮಿಳುನಾಡು ಸರ್ಕಾರದ ಅನುಮತಿ ಕಡ್ಡಾಯ: ಸಿಎಂ ಸ್ಟಾಲಿನ್

author img

By

Published : Jun 14, 2023, 11:00 PM IST

Chief Minister MK Stalin
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ ಸಾಮಾನ್ಯ ಸಮ್ಮತಿಯನ್ನು ತಮಿಳುನಾಡು ಸರ್ಕಾರ ಹಿಂಪಡೆದಿದೆ.

ಚೆನ್ನೈ(ತಮಿಳುನಾಡು): ತಮಿಳುನಾಡು ಸರ್ಕಾರವು ತನ್ನ ಪೂರ್ವಾನುಮತಿ ಇಲ್ಲದೇ ರಾಜ್ಯದಲ್ಲಿ ವಿವಿಧ ಪ್ರಕರಣಗಳ ತನಿಖೆ ನಡೆಸುವ ಮುನ್ನ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಿಂದೆ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂಪಡೆದಿದೆ. ರಾಜ್ಯ ಸರ್ಕಾರವು ಸಿಬಿಐಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ರಾಜಸ್ಥಾನ, ಕೇರಳ, ಮಿಜೋರಾಂ, ಪಂಜಾಬ್ ಮತ್ತು ತೆಲಂಗಾಣ ರಾಜ್ಯಗಳು ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಈಗಾಗಲೇ ಹಿಂಪಡೆದಿವೆ ಎಂದು ಪ್ರಕಟಣೆಯಲ್ಲಿ ರಾಜ್ಯ ಸರ್ಕಾರವೂ ಸಮರ್ಥನೆ ಮಾಡಿಕೊಂಡಿದೆ.

ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ ಸಾಮಾನ್ಯ ಸಮ್ಮತಿಯನ್ನು ತಮಿಳುನಾಡು ಸರ್ಕಾರ ಹಿಂಪಡೆದಿದ್ದು, ರಾಜ್ಯದಲ್ಲಿ ಯಾವುದೇ ತನಿಖೆ ನಡೆಸುವ ಮುನ್ನ ಕೇಂದ್ರ ಸಂಸ್ಥೆ ಸಿಬಿಐ ತಮಿಳುನಾಡು ಸರ್ಕಾರದಿಂದ ಅನುಮತಿ ಪಡೆಯಲೇಬೇಕು. ಇದನ್ನು ಈಗಾಗಲೇ ಪಶ್ಚಿಮ ಬಂಗಾಳ, ರಾಜಸ್ಥಾನ, ಕೇರಳ, ಮಿಜೋರಾಂ ಪಂಜಾಬ್ ಮತ್ತು ತೆಲಂಗಾಣ ಸರ್ಕಾರಗಳು ಜಾರಿ ಮಾಡಿವೆ ಎಂದು ತಮಿಳುನಾಡು ಗೃಹ ಇಲಾಖೆ ತಿಳಿಸಿದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯಿದೆ, 1946 ರ ಸೆಕ್ಷನ್ 6 ರ ಪ್ರಕಾರ, ರಾಜ್ಯದಲ್ಲಿ ಯಾವುದೇ ಪ್ರಕರಣವನ್ನು ತನಿಖೆ ಮಾಡುವ ಮೊದಲು ಸಿಬಿಐ ಆಯಾ ರಾಜ್ಯದಿಂದ ಅನುಮತಿ ಪಡೆಯಬೇಕು ಎಂಬ ನಿಯಮವಿದೆ.

ಬಿಜೆಪಿ ವಿರುದ್ಧ ಸ್ಟಾಲಿನ್ ವಾಗ್ದಾಳಿ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬುಧವಾರ ಬಂಧಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂಥ ಬೆದರಿಕೆ ತಂತ್ರಗಳಿಗೆ ಡಿಎಂಕೆ ಹೆದರುವುದಿಲ್ಲ. ಇದಕ್ಕೆ ಕಾನೂನಾತ್ಮಕವಾಗಿ ತಕ್ಕ ಉತ್ತರ ನೀಡಲಾಗುವುದು ಎಂದು ಕಿಡಿಕಾರಿದ್ದಾರೆ.

ಸೆಂಥಿಲ್ ಅವರು ವಿಚಾರಣೆಗೆ ಸಹಕರಿಸಲೂ ಸಿದ್ಧರಿದ್ದರೂ, ಇಡೀ ರಾತ್ರಿ ವಿಚಾರಣೆಗೊಳಪಡಿಸಲಾಗಿದೆ. ಇಡಿ ಅಧಿಕಾರಿಗಳು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ವಿದ್ಯುತ್ ಇಲಾಖೆ ಸಚಿವ ಸೆಂಥಿಲ್ ಬಾಲಾಜಿ ಅವರನ್ನು 18 ಗಂಟೆಗಳ ವಿಚಾರಣೆ ಬಳಿಕ ಇಂದು ಬೆಳಗ್ಗೆ ಬಂಧಿಸಲಾಗಿದೆ.ಆದರೆ ಇದರ ಕುರಿತಾಗಿ ಇಡಿ ಯಾವುದೇ ಮಾಹಿತಿ ನೀಡಿಲ್ಲ.

ಆದರೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ತಮಿಳುನಾಡು ಸರ್ಕಾರದ ಹಿಂಪಡೆದಿದೆ.ಸೆಂಥಿಲ್​ ಅವರು ಈ ಪ್ರಕರಣವನ್ನು ಕಾನೂನುಬದ್ಧವಾಗಿ ಎದುರಿಸುತ್ತಾರೆ ಎಂದು ತಿಳಿಸಿದ್ದಾರೆ. ಈ ಹಿಂದೆ ಎಐಎಡಿಎಂಕೆ ಸರ್ಕಾರದಲ್ಲಿ ವಿ ಸೆಂಥಿಲ್ ಬಾಲಾಜಿ ಸಾರಿಗೆ ಸಚಿವರಾಗಿದ್ದ ಅವಧಿಯಲ್ಲಿ ಸಾರಿಗೆ ನಿಗಮಗಳಲ್ಲಿ ಚಾಲಕರು ಮತ್ತು ಕಂಡಕ್ಟರ್‌ಗಳಾಗಿ ನೇಮಕ ಮಾಡಲು ವಿವಿಧ ವ್ಯಕ್ತಿಗಳಿಂದ ಕಿಕ್‌ಬ್ಯಾಕ್ ಪಡೆದಿದ್ದರು ಎಂದು ಆರೋಪವಿದೆ. ಈತ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಸಾರಿಗೆ ನಿಗಮದ ಅಧಿಕಾರಿಗಳೊಂದಿಗೆ ಎಂಟಿಸಿ, ಚೆನ್ನೈ ಸೇರಿದಂತೆ ವಿವಿಧ ಸಾರಿಗೆ ನಿಗಮಗಳಲ್ಲಿ ಉದ್ಯೋಗ ನೇಮಕಾತಿಗೆ ಲಂಚ ಸ್ವೀಕರಿಸಿರುವ ಹಾಗೂ ಹಣ ವರ್ಗಾವಣೆಯ ಹಗರಣದ ಆರೋಪವಿದೆ.

ಇದನ್ನೂಓದಿ: ರೆಸ್ಟೋರೆಂಟ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: IAS, IPS ಅಧಿಕಾರಿ ಸೇರಿ ಐವರು ಸಸ್ಪೆಂಡ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.