ETV Bharat / bharat

ಶೀಘ್ರವೇ ತಮಿಳುನಾಡು ನಿಯೋಗದಿಂದ ಕೇಂದ್ರ ಸಚಿವರ ಭೇಟಿ.. ಮೇಕೆದಾಟು ಯೋಜನೆಗೆ ಸ್ಟಾಲಿನ್​ ಅಡ್ಡಗಾಲು

author img

By

Published : Jun 18, 2022, 5:06 PM IST

ದೆಹಲಿಗೆ ತೆರಳಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಕುವ ಒತ್ತಡ ತಂತ್ರಕ್ಕೆ ಕೇಂದ್ರ ಸರ್ಕಾರ ಮಣಿಯಬಾರದು ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಒತ್ತಾಯಿಸಿದ್ದಾರೆ.

Tamil Nadu Chief Minister MK Stalin
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

ಚೆನ್ನೈ (ತಮಿಳುನಾಡು): ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಮೇಕೆದಾಟು ಸಂಬಂಧ ನಮ್ಮ ಜಲಸಂಪನ್ಮೂಲ ಸಚಿವ ದುರೈಮುರುಗನ್ ನೇತೃತ್ವದ ನಾಯಕರ ನಿಯೋಗ ಶೀಘ್ರದಲ್ಲೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧಿಸಿ ತಮಿಳುನಾಡು ನಿಯೋಗ ದೆಹಲಿಗೆ ಭೇಟಿ ನೀಡಲಿದೆ. ತಮಿಳುನಾಡು ಜನರ ಧ್ವನಿಗೆ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ. ಅಲ್ಲದೇ, ಮೇಕೆದಾಟು ಅಣೆಕಟ್ಟಿನ ವಿಷಯ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಚರ್ಚಿಸಬಹುದು ಎಂಬ ಪ್ರಾಧಿಕಾರದ ಅಧ್ಯಕ್ಷ ಎಚ್​.ಕೆ.ಹಲ್ದಾರ್ ಹೇಳಿಕೆಗೂ ಸ್ಟಾಲಿನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ವಿಷಯವು ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ. ಹೀಗಿರುವಾಗ ಅದನ್ನು ಚರ್ಚಿಸಲು ಸಿಡಬ್ಲ್ಯೂಎಂಎಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ. ಇದೇ ವೇಳೆ ದೆಹಲಿಗೆ ತೆರಳಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಕುವ ಒತ್ತಡ ತಂತ್ರಕ್ಕೆ ಕೇಂದ್ರ ಸರ್ಕಾರ ಮಣಿಯಬಾರದು ಎಂದು ತಮಿಳುನಾಡು ಸಿಎಂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ಯೋಜನೆಗಳ ವಿರುದ್ಧ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು: ಸಿಎಂಗೆ ನಡ್ಡಾ ಸಲಹೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.