ETV Bharat / bharat

ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ

author img

By

Published : Jul 18, 2023, 6:51 PM IST

Senthil Balaji, SC
ಸಚಿವ ಸೆಂಥಿಲ್ ಬಾಲಾಜಿ, ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ತನ್ನನ್ನು ಕಸ್ಟಡಿಗೆ ತೆಗೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸೆಂಥಿಲ್ ಬಾಲಾಜಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಜು.14 ರಂದು ಮದ್ರಾಸ್ ಹೈಕೋರ್ಟ್ ಬಾಲಾಜಿಯ ಇಡಿ ಬಂಧನವನ್ನು ಕಾನೂನುಬದ್ಧಗೊಳಿಸಿತ್ತು. ಇದರಿಂದ ಆಡಳಿತಾರೂಢ ಡಿಎಂಕೆ ಮತ್ತು ಬಂಧಿತ ತಮಿಳುನಾಡು ಸಚಿವ ಬಾಲಾಜಿಗೆ ಭಾರಿ ಹಿನ್ನಡೆಯಾಗಿತ್ತು. ಸೆಂಥಿಲ್ ಬಾಲಾಜಿ ಅವರ ಪತ್ನಿ ಮೇಗಲಾ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿತ್ತು. ಜತೆಗೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು.

ಇಡಿಗೆ ಅನುಮತಿಸಲಾದ ಕಸ್ಟಡಿ ಅವಧಿಯಿಂದ ಖಾಸಗಿ ಆಸ್ಪತ್ರೆಯಲ್ಲಿ ಐಎಲ್ ಚಿಕಿತ್ಸೆಗೆ ನಿರಾಕರಿಸಲಾಗಿದೆ. ರಾಜ್ಯದ ಸಾರಿಗೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಹಣ ಪಡೆದ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಇಡಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿತ್ತು. ಅವರ ಪತ್ನಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆಗೆ ಒಳಪಡಿಸುವಲ್ಲಿ ಮದ್ರಾಸ್ ಹೈಕೋರ್ಟ್ ತಪ್ಪೆಸಗಿದೆ ಮತ್ತು ಅವರನ್ನು ಬಂಧಿಸಿದ ನಂತರ ಸರ್ಕಾರಿ ಆಸ್ಪತ್ರೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಇಡಿ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.

ಇಡಿ ದಾಖಲಿಸಿದ ಪ್ರಕರಣದಲ್ಲಿ ಪತ್ನಿ ಬಾಲಾಜಿ ಅವರ ಬಿಡುಗಡೆಗಾಗಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಮನವಿಗೆ ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠವು ಭಿನ್ನ ತೀರ್ಪು ನೀಡಿತ್ತು. ನಂತರ ಸುಪ್ರೀಂಕೋರ್ಟ್ ಈ ವಿಷಯವನ್ನು ತ್ರಿಸದಸ್ಯ ಪೀಠದ ಮುಂದೆ ಇರಿಸಲು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಸೂಚಿಸಿತ್ತು.

ಇದನ್ನೂ ಓದಿ: ಜಸ್ಟಿಸ್ ಸಿ ವಿ ಕಾರ್ತಿಕೇಯನ್ ಪೀಠದ ಎದುರು ಸೇಂಥಿಲ್​ ಬಾಲಾಜಿ ಹೆಬಿಯಸ್​ ಕಾರ್ಪಸ್​ ಅರ್ಜಿ

ಪ್ರಕರಣದ ಹಿನ್ನೆಲೆ: ವಿದ್ಯುತ್ ಹಾಗೂ ಅಬಕಾರಿ ಸಚಿವ ಬಾಲಾಜಿ ಅವರನ್ನು ಜೂ.14 ರಂದು ಇಡಿ ಬಂಧಿಸಿತ್ತು. ಆ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.15 ರಂದು ಮದ್ರಾಸ್ ಹೈಕೋರ್ಟ್ ಅವರನ್ನು ಅವರ ಆಯ್ಕೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅವಕಾಶ ನೀಡಿತು. ನಂತರ ಅವರನ್ನು ತಮಿಳುನಾಡು ಸರ್ಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಆಳ್ವಾರಪೇಟೆಯ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಸಂಹಿತೆಯ ಅಡಿ ಬಂಧನದ ಕಾರಣಗಳನ್ನು ತಿಳಿಸುವುದು ಸೇರಿದಂತೆ ತನಿಖಾ ಸಂಸ್ಥೆ ಅಧಿಕಾರಿಗಳು ನಿಯಮಗಳನ್ನು ಅನುಸರಿಸಿಲ್ಲ ಎಂದು ಆರೋಪಿಸಿ ಸಚಿವರ ಪತ್ನಿ ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯ ಮೇಲೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ಅಂಗೀಕರಿಸಿತ್ತು. ಕ್ರಿಮಿನಲ್ ಪ್ರೊಸೀಜರ್ ಕೋಡ್ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಲು ಇಡಿ ವಿಫಲವಾದ ಕಾರಣ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅವರ ಪತ್ನಿ ಮನವಿ ಮಾಡಿದ್ದರು.

2021ರಲ್ಲಿ ಕೂಡ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸಲ್ಲಿಸಲಾದ ಎನ್‌ಫೋರ್ಸ್‌ಮೆಂಟ್ ಕೇಸ್ ಇನ್ಫರ್ಮೇಷನ್ ರಿಜಿಸ್ಟರ್ (ECIR) ಗೆ ಸಂಬಂಧಿಸಿದಂತೆ ಇಡಿ ಬಾಲಾಜಿ ಅವರನ್ನು ಬಂಧಿಸಿತ್ತು. ಬಾಲಾಜಿ ಅವರು 2015ರಲ್ಲಿ ಜಯಲಲಿತಾ ಅವರ ಕ್ಯಾಬಿನೆಟ್‌ನಲ್ಲಿ ಸಾರಿಗೆ ಸಚಿವರಾಗಿದ್ದಾಗ ಉದ್ಯೋಗಕ್ಕಾಗಿ ಹಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ 2018ರಲ್ಲಿ ಸ್ಥಳೀಯ ಪೊಲೀಸರು ಅವರ ವಿರುದ್ಧ ದಾಖಲಿಸಿದ ಮೂರು ಎಫ್‌ಐಆರ್‌ಗಳ ಆಧಾರದ ಮೇಲೆ ಇಸಿಐಆರ್​ ದಾಖಲಿಸಲಾಗಿತ್ತು.

2011 ರಿಂದ 2015 ರವರೆಗೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಸರ್ಕಾರದ ಅವಧಿಯಲ್ಲಿ ಅವರು ಸಾರಿಗೆ ಸಚಿವರಾಗಿದ್ದರು. ಡಿಸೆಂಬರ್ 2018 ರಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (DMK)ಗೆ ಸೇರಿದರು. ಮೇ 2021ರಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ವಿದ್ಯುತ್ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಪ್ರಕರಣ: ಹೈಕೋರ್ಟ್‌ನಿಂದ ವಿಭಿನ್ನ ತೀರ್ಪು.. ತ್ರಿಸದಸ್ಯ ಪೀಠ ರಚಿಸಲು ಸುಪ್ರೀಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.