ETV Bharat / bharat

ಭಾರತದಲ್ಲಿ ಕೋವಿಡ್​​ ಉಲ್ಬಣ: 3,545 ಹೊಸ ಪ್ರಕರಣ, 27 ಮಂದಿ ಸಾವು

author img

By

Published : May 6, 2022, 9:50 AM IST

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,545 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,30,94,938ಕ್ಕೆ ಏರಿಕೆಯಾಗಿದೆ.

Today india covid report
ಕೋವಿಡ್​​ ವರದಿ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,545 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಇದು ನಿನ್ನೆಗಿಂತ ಶೇ. 8.2ರಷ್ಟು ಹೆಚ್ಚು. ಒಂದು ದಿನ ಮುಂಚಿತವಾಗಿ ಅಂದರೆ ಗುರುವಾರ, ದೇಶಾದ್ಯಂತ 3,275 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನಿನ್ನೆ (ಗುರುವಾರ) ದೇಶಾದ್ಯಂತ ಒಟ್ಟು 27 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5, 24,002ಕ್ಕೆ ಏರಿಕೆಯಾಗಿದೆ. ಪ್ರಸ್ತುತ, ದೇಶಾದ್ಯಂತ ಒಟ್ಟು 19,688 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಚೇತರಿಕೆ ದರ ಶೇ. 98.74 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 3,549 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 4,25,51,248 ಜನರು ಚೇತರಿಸಿಕೊಂಡಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ 1.07 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ದರ ಶೇ.0.70ರಷ್ಟಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿ ನಿರ್ವಹಿಸಲಾದ ಒಟ್ಟು ಲಸಿಕೆಯ ಡೋಸ್​ಗಳ ಸಂಖ್ಯೆ 189.81 ಕೋಟಿ ಆಗಿದೆ.

ಜಾನ್ಸನ್ ಆ್ಯಂಡ್ ಜಾನ್ಸನ್ ಲಸಿಕೆ ಬಳಕೆಗೆ ಮಿತಿ: 18 ದಶಲಕ್ಷಕ್ಕೂ ಹೆಚ್ಚು ಅಮೆರಿಕನ್ನರಿಗೆ ನೀಡಲಾದ ಜಾನ್ಸನ್ ಆ್ಯಂಡ್ ಜಾನ್ಸನ್ ಲಸಿಕೆ ಮಾರಣಾಂತಿಕ 'ರಕ್ತ ಹೆಪ್ಪುಗಟ್ಟುವಿಕೆ' ಉಂಟು ಮಾಡಬಹುದು ಎಂದು ಯುಎಸ್​​ ಆಹಾರ ಮತ್ತು ಔಷಧ ಆಡಳಿತ (FDA) ಗುರುವಾರ ಎಚ್ಚರಿಕೆ ನೀಡಿದೆ. ಹೀಗಾಗಿ ಲಸಿಕೆಯ ಅಧಿಕೃತ ಬಳಕೆಯನ್ನು ಸೀಮಿತಗೊಳಿಸಿದೆ. ಈ ಲಸಿಕೆಯನ್ನು ಕಳೆದ ವರ್ಷ ಫೆಬ್ರವರಿಯಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಗಿತ್ತು.

ಇದನ್ನೂ ಓದಿ: 'ಭಾರತದಲ್ಲಿ 47 ಲಕ್ಷ ಕೋವಿಡ್ ಸಾವು': WHO ವರದಿ ತಿರಸ್ಕರಿಸಿದ ಭಾರತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.