ETV Bharat / bharat

ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

author img

By ETV Bharat Karnataka Team

Published : Sep 30, 2023, 3:45 PM IST

ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಿದ್ದಾರೆ.

two-infiltrators-killed-as-infiltration-bid-foiled-along-loc-in-jammu-and-kashmir-kupwara-says-police
ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರ ಹೊಡೆದುರಳಿಸಿದ ಭಾರತೀಯ ಸೇನೆ

ಕುಪ್ವಾರ ( ಜಮ್ಮು ಮತ್ತು ಕಾಶ್ಮೀರ) : ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಿರುವುದಾಗಿ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್​ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಸುಳಲು ಯತ್ನಿಸುತ್ತಿದ್ದ ಇಬ್ಬರು ನುಸುಳುಕೋರರು ಭದ್ರತಾ ಸಿಬ್ಬಂದಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎರಡು ಎಕೆ ರೈಫಲ್ಸ್​​, ನಾಲ್ಕು ಮ್ಯಾಗಜಿನ್​, 90 ಗುಂಡು, ಒಂದು ಪಿಸ್ತೂಲ್​ ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕುಪ್ವಾರ ಪೊಲೀಸ್​ ಅಧಿಕಾರಿಗಳು, ಇಲ್ಲಿನ ಕುಮ್ಕಾಡಿ ಏರಿಯಾದ ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ನುಸುಳುಕೋರರು ಒಳ ನುಗ್ಗುತ್ತಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭಿಸಿತ್ತು. ಈ ಸಂಬಂಧ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ನುಸುಳುಕೋರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಡಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೊತೆಗೆ, ಎನ್​ಕೌಂಟರ್​ ನಡೆದ ಸ್ಥಳದಿಂದ ಎರಡು ಎಕೆ ರೈಫಲ್ಸ್​​, ನಾಲ್ಕು ಮ್ಯಾಗಜಿನ್​, 90 ಗುಂಡು, ಒಂದು ಪಿಸ್ತೂಲ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ನುಸುಳುಕೋರರ ಬಳಿಯಿದ್ದ ಪಾಕಿಸ್ತಾನದ ಕರೆನ್ಸಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪೂಂಚ್​ ಜಿಲ್ಲೆಯಲ್ಲಿ ಇಬ್ಬರು ನುಸುಳುಕೋರರ ಹತ್ಯೆ : ಇದಕ್ಕೂ ಮುನ್ನ, ಜಮ್ಮು ಮತ್ತು ಕಾಶ್ಮೀರದ ಪೂಂಚ್​ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸಿದ್ದ ಇಬ್ಬರು ನುಸುಳುಕೋರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು.

ಈ ಬಗ್ಗೆ ಮಾಹಿತಿ ನೀಡಿದ್ದ ಸೇನೆಯ ಲೆಫ್ಟ್​ನೆಂಟ್​ ಕರ್ನಲ್​ ಸುನೀಲ್​ ಬರ್ತವಾಲ್​, ಪೂಂಚ್​ ಜಿಲ್ಲೆಯ ಮಂಡಿ ಉಪವಲಯದಲ್ಲಿ ಇಬ್ಬರು ಉಗ್ರಗಾಮಿಗಳು ಭಾರತದ ಗಡಿ ನಿಯಂತ್ರಣ ರೇಖೆಯನ್ನು ದಾಟುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದರು. ಈ ಸಂಬಂಧ ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ನುಸುಳುಕೋರರನ್ನು ಹಿಮ್ಮೆಟ್ಟಿಸಲು ತಕ್ಷಣ ಕಾರ್ಯಾಚರಣೆ ಕೈಗೊಂಡಿತ್ತು.

ಇಲ್ಲಿನ ದಟ್ಟವಾದ ಕಾಡು, ಕಡಿದಾದ ಇಳಿಜಾರು ಪ್ರದೇಶಗಳಲ್ಲಿ ಉಗ್ರಗಾಮಿಗಳು ಮತ್ತು ಭಾರತೀಯ ಸೇನೆ ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿತ್ತು ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ : ಭಾರತದೊಳಗೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರಳಿಸಿದ ರಕ್ಷಣಾ ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.