ETV Bharat / bharat

UGC recruitment: ರಾಜ್ಯದ ವಿವಿಗಳಲ್ಲಿ ಖಾಲಿಯಿರುವ ಅಧ್ಯಾಪಕರ ಹುದ್ದೆಗೆ ಕೂಡಲೇ ನೇಮಕಾತಿಗೆ ಪತ್ರ ಬರೆದ ಯುಜಿಸಿ

author img

By

Published : Jul 1, 2023, 10:26 AM IST

ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಅಧ್ಯಾಪಕರ ನೇಮಕಾತಿಯನ್ನು ಕೂಡಲೇ ಭರ್ತಿ ಮಾಡುವಂತೆ ಕೋರಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಯುಜಿಸಿ ಪತ್ರ ಕಳುಹಿಸಿದೆ.

UGC
ಯುಜಿಸಿ

ನವದೆಹಲಿ : ವಿವಿಧ ರಾಜ್ಯಗಳಲ್ಲಿ ಅನೇಕ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಅಧ್ಯಾಪಕರ ಹುದ್ದೆಗಳು ಇನ್ನೂ ಖಾಲಿ ಇವೆ. ಇದೀಗ, ಯುಜಿಸಿ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿದ್ದು, ಕೂಡಲೇ ಖಾಲಿ ಇರುವ ಹುದ್ದೆಗೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ ಸೂಚಿಸಿದೆ.

ಈ ಸಂಬಂಧ ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ರಾಜ್ಯಪಾಲರ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಜೊತೆಗೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯ ಉನ್ನತ ಶಿಕ್ಷಣ ಮಂಡಳಿಗಳಿಗೂ ಪತ್ರವನ್ನು ಕಳುಹಿಸಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಮಾಮಿದಾಳ ಜಗದೇಶ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಾಪಕರ ಕೊರತೆಯು ಬೋಧನೆ ಮತ್ತು ಕಲಿಕಾ ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ, ಖಾಲಿ ಇರುವ ಅಧ್ಯಾಪಕರ ಹುದ್ದೆಗಳನ್ನು ಸೂಕ್ತ ಅರ್ಹ ಮತ್ತು ಸಮರ್ಥ ಅಭ್ಯರ್ಥಿಗಳೊಂದಿಗೆ ಸಕಾಲಿಕವಾಗಿ ಭರ್ತಿ ಮಾಡುವುದು ಅತ್ಯಗತ್ಯ. ಆದಷ್ಟು ಬೇಗ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಯುಜಿಸಿ ಅಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿ : ವಿವಿಗಳಲ್ಲಿ ಖಾಲಿ ಇರುವ ಹುದ್ದೆ 6 ತಿಂಗಳೊಳಗೆ ಭರ್ತಿಗೆ ಯುಜಿಸಿ ತಾಕೀತು

ಈ ನಿಟ್ಟಿನಲ್ಲಿ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಈಗಾಗಲೇ "UGC (ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಇತರ ಶೈಕ್ಷಣಿಕ ಸಿಬ್ಬಂದಿ ನೇಮಕಾತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ಇತರೆ ಕ್ರಮಗಳು) ನಿಯಮಗಳು, 2018" ಅನ್ನು ಪ್ರಕಟಿಸಿದೆ. ಹಾಗೆಯೇ, ವಿಶ್ವವಿದ್ಯಾನಿಲಯ ಮತ್ತು ಕಾಲೇಜು ಅಧ್ಯಾಪಕರ ನೇಮಕಾತಿ ಮತ್ತು ಸೇವಾ ಷರತ್ತುಗಳಿಗೆ ಕನಿಷ್ಠ ವಿದ್ಯಾರ್ಹತೆಗಳು ಮತ್ತು ಇತರೆ ಅಗತ್ಯಗಳ ಕುರಿತು ಯುಜಿಸಿ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿದೆ ಎಂದು ಕುಮಾರ್ ತಿಳಿಸಿದ್ದಾರೆ.

UGC ಪತ್ರದಲ್ಲೇನಿದೆ?: "ಉನ್ನತ ಶಿಕ್ಷಣ ಸಂಸ್ಥೆಗಳ ಯಶಸ್ಸಿಗೆ ಪ್ರಮುಖ ಅಂಶವೆಂದರೆ ಗುಣಮಟ್ಟದ ಅಧ್ಯಾಪಕರು. ಏಕೆಂದರೆ, ಅವರು ಎಲ್ಲಾ ಶೈಕ್ಷಣಿಕ ಪ್ರಕ್ರಿಯೆಗಳ ಆಧಾರ ಸ್ತಂಭಗಳಾಗಿದ್ದಾರೆ. ಸಂಸ್ಥೆಯಲ್ಲಿ ಅನುಕೂಲಕರವಾದ ಕಲಿಕೆಯ ವಾತಾವರಣ ನಿರ್ಮಿಸುವುದು, ಕಾರ್ಯಕ್ರಮ-ನಿರ್ದಿಷ್ಟ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸುವುದು, ಬೋಧನೆ-ಕಲಿಕೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಗಳ ಪರಿಣಾಮಕಾರಿ ಭಾಗಿಯಾಗಿ, ಸಮಾಜದ ಜವಾಬ್ದಾರಿಯುತ ಸದಸ್ಯರಾಗಿ ವಿದ್ಯಾರ್ಥಿಗಳು ಹೊರಹೊಮ್ಮುವಂತೆ ಮಾಡುತ್ತಾರೆ. ಉನ್ನತ ಶಿಕ್ಷಣ ಸಂಸ್ಥೆಗಳು ಪ್ರೇರಿತ, ಶಕ್ತಿಯುತ ಮತ್ತು ಸಮರ್ಥ ಅಧ್ಯಾಪಕ ಸದಸ್ಯರನ್ನು ನೇಮಕ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಆದ್ದರಿಂದ, ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಸಂಯೋಜಿತ ಕಾಲೇಜುಗಳಲ್ಲಿ ಖಾಲಿ ಇರುವ ಅಧ್ಯಾಪಕರ ಹುದ್ದೆಗಳನ್ನು ಸಕಾಲಿಕವಾಗಿ ಭರ್ತಿ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಸೂಚಿಸುತ್ತೇನೆ" ಎಂದು UGC ಅಧ್ಯಕ್ಷರು ವಿವಿಧ ರಾಜ್ಯ ಸರ್ಕಾರಗಳಿಗೆ ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ : ಪಶ್ನೆ ಪತ್ರಿಕೆಯಲ್ಲಿ ಎಡವಟ್ಟು-ಪರೀಕ್ಷಾರ್ಥಿಗಳಿಂದ ಪ್ರತಿಭಟನೆ: ಮರು ಪರೀಕ್ಷೆಗೆ ಒಪ್ಪಿದ UGC

ETV Bharat Logo

Copyright © 2024 Ushodaya Enterprises Pvt. Ltd., All Rights Reserved.