ETV Bharat / bharat

ಕೇಂದ್ರ ಸಚಿವರ ಪುತ್ರನ ಕಾರು ಹರಿದು ಹಿಂಸಾಚಾರಕ್ಕೆ ಕಾರಣವಾದ ಲಖೀಂಪುರದಲ್ಲಿ ಎಲ್ಲ ಕ್ಷೇತ್ರ ಗೆದ್ದ ಬಿಜೆಪಿ!

author img

By

Published : Mar 10, 2022, 4:18 PM IST

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ತೀವ್ರ ಹಿಂಸಾಚಾರಕ್ಕೆ ಕಾರಣವಾಗಿದ್ದ ಉತ್ತರ ಪ್ರದೇಶದ ಲಖೀಂಪುರ ಖೇರಿಯ ಎಲ್ಲ ಕ್ಷೇತ್ರಗಳಲ್ಲೂ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಪಡೆದಿದೆ.

UP Election result: BJP sweeps lakhimpur Kheri wins
UP Election result: BJP sweeps lakhimpur Kheri wins

ಲಖೀಂಪುರ ಖೇರಿ(ಉತ್ತರ ಪ್ರದೇಶ): ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆದು, ಹಲವು ರೈತರ ಸಾವಿಗೆ ಕಾರಣವಾಗಿದ್ದ ಲಖೀಂಪುರ ಖೇರಿ ಜಿಲ್ಲೆಯಲ್ಲಿನ ಎಲ್ಲ 8 ವಿಧಾನಸಭೆ ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲಖೀಂಪುರದಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿದ್ದರು. ಈ ಘಟನೆಯ ಬಳಿಕ ದೊಡ್ಡ ಮಟ್ಟದ ಹಿಂಸಾಚಾರ ಉಂಟಾಗಿ ನಾಲ್ವರು ರೈತರು, ಮೂವರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದರು. ಇದು ದೇಶಾದ್ಯಂತ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಭಾರತೀಯ ಜನತಾ ಪಾರ್ಟಿ ವಿರುದ್ಧ ಪ್ರತಿಭಟನೆಗೂ ಕಾರಣವಾಗಿತ್ತು.

ಇದನ್ನೂ ಓದಿ: 'ಶ್ರೀಕೃಷ್ಣ ನನ್ನ ಕನಸಲ್ಲಿ ಬಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದಿದ್ರು': ಹೇಮಮಾಲಿನಿ

ಈ ಘಟನೆಯ ಹಿನ್ನೆಲೆಯಲ್ಲಿ 2022ರ ವಿಧಾನಸಭೆ ಚುನಾವಣೆಯಲ್ಲಿ ಲಖೀಂಪುರ ಖೇರಿಯಲ್ಲಿ ಬಿಜೆಪಿ ಖಾತೆ ತೆರೆಯುವ ಸಾಧ್ಯತೆ ಕಡಿಮೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ ಇದೀಗ ಎಲ್ಲ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಹಿಂಸಾಚಾರ ನಡೆದ ನಿಘಾಸನ್​ ಕ್ಷೇತ್ರದಲ್ಲಿ ಬಿಜೆಪಿಯ ಶಶಾಂಕ್​ ವರ್ಮಾ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ದಾಖಲು ಮಾಡಿದ್ದಾರೆ. 2017 ರಲ್ಲೂ ಲಖೀಂಪುರ್​​ನ ಪಾಲಿಯಾ, ನಿಗಾಸನ್, ಗೋಲಾ ಖೋರಾನಾಥ್, ಶ್ರೀನಗರ, ಧೌರಾಹ್ರಾ, ಲಖಿಂಪುರ, ಕಸ್ತಾ ಮತ್ತು ಮೊಹಮ್ಮದಿಯಲ್ಲಿ ಬಿಜೆಪಿ ಗೆಲುವು ದಾಖಲು ಮಾಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.