ETV Bharat / bharat

ಯುವತಿ ಅಪಹರಿಸಿ, ದೆಹಲಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ

author img

By

Published : Mar 7, 2022, 9:38 AM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶ ಮೂಲದ ಯುವತಿ ಅಪಹರಿಸಿ, ದೆಹಲಿಗೆ ಕರೆದೊಯ್ದು 5 ಜನರಿಂದ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಜಾಫರ್‌ನಗರ (ಯುಪಿ): ಕಾಲೇಜೊಂದರಲ್ಲಿ ಓದುತ್ತಿದ್ದ ಯುವತಿಯನ್ನು ಅಪಹರಿಸಿ, ದೆಹಲಿಗೆ ಕರೆದೊಯ್ದು, ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಯುವತಿಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಹೆಚ್‌ಒ) ಧರ್ಮೇಂದ್ರ ಕುಮಾರ್ ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಯುವತಿಯನ್ನು ಶುಕ್ರವಾರ ಖತೌಲಿ ಪಟ್ಟಣದ ಕಾಲೇಜಿನ ಹೊರಗೆ ಅಪಹರಿಸಿ ಕಾರಿನಲ್ಲಿ ದೆಹಲಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಬಳಿಕ ಆರೋಪಿಗಳು ಘಟನೆಯ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿ, ಸಂತ್ರಸ್ತೆಯನ್ನು ಮೀರತ್​ನಲ್ಲಿ ಬಿಟ್ಟು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದಲ್ಲಿ ಶಿವ, ಅರುಣ್, ಅಂಶ್, ವರುಣ್ ಮತ್ತು ಸುಮಿತ್ ಕುಮಾರ್ ಎಂಬುವವರನ್ನು ಆರೋಪಿಗಳೆಂದು ಹೆಸರಿಸಲಾಗಿದ್ದು, ಅವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಎಸ್‌ಹೆಚ್‌ಒ ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಕಾಮುಕನಿಂದ ಕಿರುಕುಳ.. ಫೇಸ್​ಬುಕ್​ನಲ್ಲಿ ವಿಡಿಯೋ ಸಹಿತ ಘಟನೆ ಬಿಚ್ಚಿಟ್ಟ ಶಿಕ್ಷಕಿ


ETV Bharat Logo

Copyright © 2024 Ushodaya Enterprises Pvt. Ltd., All Rights Reserved.