ETV Bharat / bharat

VIDEO.. ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣಪಕ್ಷಿ.. ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯಾವಳಿ!

author img

By

Published : Dec 25, 2021, 3:34 PM IST

ಕಂಪನಿಯೊಂದರಲ್ಲಿ ಸಫಾಯಿ ಕರ್ಮಚಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿವೆ.

death video during cleaning in noida
death video during cleaning in noida

ನವದೆಹಲಿ/ನೋಯ್ಡಾ: ಮನುಷ್ಯನ ಜೀವನ ನೀರಿನ ಮೇಲಿನ ಗುಳ್ಳೆಯಂತೆ. ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಕೊನೆಯಾಗಬಹುದು. ಸದ್ಯ ಅಂತಹ ಘಟನೆವೊಂದು ನೋಯ್ಡಾದ ಸೆಕ್ಟರ್​​ 63ರಲ್ಲಿ ನಡೆದಿದ್ದು, ಅದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣಪಕ್ಷಿ... ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯಾವಳಿ

ಪೊಲೀಸ್​​ ಸ್ಟೇಷನ್​​ III ಸೆಕ್ಟರ್​​​ 36ರಲ್ಲಿ ಎಲೆಕ್ಟ್ರಾನಿಕ್​​ ಬಿಡಿ ಭಾಗಗಳನ್ನ ತಯಾರಿಸುವ ಕಂಪನಿವೊಂದರಲ್ಲಿ ಫ್ಲೋರ್​​ ಸ್ವಚ್ಛ ಮಾಡುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವನ್ನಪ್ಪಿದ್ದಾನೆಂದು ವೈದ್ಯರು ಘೋಷಣೆ ಮಾಡಿದ್ದಾರೆ. ವೈದ್ಯರು ನೀಡಿರುವ ಮಾಹಿತಿ ಪ್ರಕಾರ ಹೃದಯಾಘಾತದಿಂದ ಆತ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್​​ ಸೇರಿ ವಿವಿಧ ಪಕ್ಷಗಳಿಂದ ಆಫರ್​ ಬಂದಿವೆ.. ಈವರೆಗೂ ಫೈನಲ್​ ನಿರ್ಧಾರ ಆಗಿಲ್ಲ ಎಂದ ಭಜ್ಜಿ..

ಫ್ಲೋರ್​​ ಸ್ವಚ್ಛ ಮಾಡ್ತಿದ್ದ ವೇಳೆ ಏಕಾಏಕಿಯಾಗಿ ಕೆಳಗೆ ಬಿದ್ದು, ಸಾವನ್ನಪ್ಪಿರುವ ದೃಶ್ಯಾವಳಿ ಕಂಪನಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗ್ತಿವೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಮೃತ ವ್ಯಕ್ತಿಯ ಕುಟುಂಬಸ್ಥರು ಪರಿಹಾರಕ್ಕಾಗಿ ಒತ್ತಾಯ ಮಾಡಿದ್ದಾರೆ. ರಾಕೇಶ್​ ಸಾವನ್ನಪ್ಪಿದ್ದಾನೆಂದು ವೈದ್ಯರು ಘೋಷಣೆ ಮಾಡುತ್ತಿದ್ದಂತೆ ಆತನೊಂದಿಗೆ ಆಸ್ಪತ್ರೆಗೆ ಬಂದಿದ್ದ ಉದ್ಯೋಗಿಗಳು ಆತನ ಶವ ಆಸ್ಪತ್ರೆಯಲ್ಲೇ ಬಿಟ್ಟು ಹೋಗಿದ್ದಾರೆಂದು ಮೃತನ ಸಂಬಂಧಿಕರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.