ETV Bharat / bharat

ಮೊಬೈಲ್ ಫೋನ್​​ಗಾಗಿ ರಸ್ತೆ ಮೇಲೆ ಬಿದ್ದು, ಪ್ರಾಣ ಕಳೆದುಕೊಂಡ ಯುವತಿ!

author img

By

Published : Jun 11, 2021, 4:50 PM IST

ಬೈಕ್​ನಲ್ಲಿ ಬಂದ ಮೊಬೈಲ್ ಕಳ್ಳರಿಂದ ಮೊಬೈಲ್ ರಕ್ಷಿಸಿಕೊಳ್ಳಲು ಮುಂದಾದ ಯುವತಿ, ರಸ್ತೆ ಮೇಲೆ ಬಿದ್ದು, ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

Woman Falls Off Auto, Dies Trying To Get Phone Back From Snatchers Near Mumbai
ಮೊಬೈಲ್ ಫೋನ್​​ಗಾಗಿ ಪ್ರಾಣ ಕಳೆದುಕೊಂಡ ಯುವತಿ!

ಥಾಣೆ, ಮಹಾರಾಷ್ಟ್ರ: ಮೊಬೈಲ್​ ಕಳ್ಳರ ಕಾರಣದಿಂದಾಗಿ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿರುವ ಘಟನೆ ಮುಂಬೈ ಸಮೀಪದ ಥಾಣೆ ಸಮೀಪ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾಲ್​ನಲ್ಲಿರುವ ಸ್ಪಾನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆಲಸ ಮುಗಿಸಿಕೊಂಡು ತನ್ನ ಸ್ನೇಹಿತೆಯೊಂದಿಗೆ ಆಟೋರಿಕ್ಷಾದಲ್ಲಿ ರಾತ್ರಿ ಸುಮಾರು 8 ಗಂಟೆಗೆ ಮನೆಗೆ ತೆರಳುತ್ತಿದ್ದಳು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಟೋರಿಕ್ಷಾದಲ್ಲಿ ಕುಳಿತಿದ್ದ ಯುವತಿಯ ಕೈಯಿಂದ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.

ಈ ವೇಳೆ ಪಟ್ಟು ಬಿಡದ ಯುವತಿ ತನ್ನ ಮೊಬೈಲ್​ ಅನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದು, ಆಟೋ ರಿಕ್ಷಾದಿಂದ ಹೊರಗೆ ಬಾಗಿದ್ದಾಳೆ. ಈ ವೇಳೆ ನಿಯಂತ್ರಣ ತಪ್ಪಿ, ರಸ್ತೆಯ ಮೇಲೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ.

ಇದನ್ನೂ ಓದಿ: ಕೋವಿನ್ ಸೈಟ್​​ ಹ್ಯಾಕ್... ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ

ತಕ್ಷಣ ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ಯುವತಿಯ ಸ್ನೇಹಿತೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಮೊಬೈಲ್ ಕದಿಯಲು ಬಂದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ.

ಆರೋಪಿಗಳನ್ನು ಅಲ್ಕೇಶ್ ಪರ್ವೆಜ್ ಮೊಮಿನ್ ಅನ್ಸಾರಿ (20) ಎಂದು ಗುರುತಿಸಲಾಗಿದ್ದು, ಮತ್ತೋರ್ವ ಆರೋಪಿ 18 ವರ್ಷ ವಯಸ್ಸಿನವನಾಗಿದ್ದಾನೆ ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.