ETV Bharat / bharat

ಲಿವ್​ ಇನ್ ರಿಲೇಶನ್​ಶಿಪ್​: ಸಂಗಾತಿಯ ಮಗಳ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

author img

By ETV Bharat Karnataka Team

Published : Jan 18, 2024, 10:21 PM IST

ಕಳೆದ ಎಂಟು ವರ್ಷಗಳಿಂದ ಲಿವ್​ ಇನ್ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆಯ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

Woman's live in partner rapes her teen daughter, arrested
ಲಿವ್​ ಇನ್ ರಿಲೇಶನ್​ಶಿಪ್​: ಸಂಗಾತಿಯ ಮಗಳ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

ನವದೆಹಲಿ: ಲಿವ್​ ಇನ್ ರಿಲೇಶನ್​ಶಿಪ್​ನಲ್ಲಿದ್ದ ಸಂಗಾತಿಯ ಪುತ್ರಿಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ ಪ್ರಕರಣ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಗಾಜಿಯಾಬಾದ್‌ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಬಸ್​ ಚಾಲಕನಾಗಿದ್ದು, ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಿದ್ದ. ಕಳೆದ ಎಂಟು ವರ್ಷಗಳಿಂದ ಮಹಿಳೆಯೊಬ್ಬರೊಂದಿಗೆ ಲಿವ್​ ಇನ್ ರಿಲೇಶನ್​ಶಿಪ್​ನಲ್ಲಿದ್ದರು. ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ಇಬ್ಬರೂ ಸಹಜೀವನ ನಡೆಸುತ್ತಿದ್ದರು. ಮಹಿಳೆಗೆ ಈ ಹಿಂದೆಯೇ ಮದುವೆಯಾಗಿ ಮೂವರು ಮಕ್ಕಳು ಇದ್ದಾರೆ. ಅಲ್ಲದೇ, ಲಿವ್​ ಇನ್ ರಿಲೇಶನ್​ಶಿಪ್​ನಿಂದ ಈ ವ್ಯಕ್ತಿ ಮೂಲಕ ಓರ್ವ ಮಗ ಇದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

2023ರ ಜುಲೈ 23ರಂದು ಮಹಿಳೆ ತನ್ನ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹೋಗಿದ್ದಳು. ಈ ಸಮಯದಲ್ಲಿ ಈ ವ್ಯಕ್ತಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ, ಈ ಕೃತ್ಯಯನ್ನು ಎಲ್ಲಿಯೂ ಬಾಯ್ಬಿಡದಂತೆ ಆರೋಪಿ ಆಕೆಗೆ ಬೆದರಿಕೆ ಹಾಕಿದ್ದ. ನಂತರ ತನ್ನ ದುಷ್ಕೃತ್ಯ ಅನೇಕ ಬಾರಿ ಪುನರಾವರ್ತಿಸಿದ್ದಾನೆ. ಇತ್ತೀಚೆಗೆ ಇದರ ತಿಳಿದ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಇದರ ಪ್ರಕಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಮತ್ತು ಆಪ್ತ ಸಮಾಲೋಚನೆ ನಡೆಸಲಾಗಿದೆ. ಅಲ್ಲದೇ, ಸಿಆರ್​ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಈ ಘಟನೆಯ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ), ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೊಟೇಲ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಯುವಕನ ವಿರುದ್ಧ ಎಫ್‌ಐಆರ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.