ETV Bharat / briefs

ಕನಕಗಿರಿಯಲ್ಲಿ 200 ಎಕರೆ ಜಾಗದಲ್ಲಿ ತೋಟಗಾರಿಕೆ ಪಾರ್ಕ್​, ಚರ್ಚೆ

author img

By

Published : Jun 17, 2021, 8:45 PM IST

ಕನಕಗಿರಿ ತಾಲೂಕಿನ ಸಿರವಾರ ಗ್ರಾಮದ ಬಳಿ ಸುಮಾರು 97 ಕೋಟಿ ಮೊತ್ತದ ತೋಟಗಾರಿಕಾ ಟೆಕ್ನಾಲಜಿ ಪಾರ್ಕ್​ ನಿರ್ಮಿಸಲು ಚರ್ಚೆ ನಡೆಸಲಾಗಿದೆ.

 Horticulture Park on 200 acres of land at Kanakagiri
Horticulture Park on 200 acres of land at Kanakagiri

ಗಂಗಾವತಿ: ಕನಕಗಿರಿ ತಾಲೂಕಿನ ಸಿರವಾರ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಸುಮಾರು 97 ಕೋಟಿ ಮೊತ್ತದ ತೋಟಗಾರಿಕಾ ಟೆಕ್ನಾಲಜಿ ಪಾರ್ಕ್​ಗೆ ಸಂಬಂಧಿಸಿದಂತೆ ಕನಕಗಿರಿ ಶಾಸಕ ಬಸವರಾಜ ದಢೇಸುಗೂರು, ತೋಟಗಾರಿಕಾ ಸಚಿವ ಆರ್. ಶಂಕರ್ ಜೊತೆ ಚರ್ಚೆ ನಡೆಸಿದ್ದಾರೆ.

ಮಳೆಯಾಶ್ರಿತ ಹಾಗೂ ಎಲ್ಲ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದ ಕನಕಗಿರಿ ಕ್ಷೇತ್ರದಲ್ಲಿ ತೋಟಗಾರಿಕಾ ಟೆಕ್ನಾಲಜಿ ಪಾರ್ಕ್​ ನಿರ್ಮಾಣ ಮಾಡುವುದರಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾವಿರಾರು ಉದ್ಯೋಗ ಸೃಷ್ಟಿಯಾಗುತ್ತವೆ. ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣವಾಗುತ್ತಿರುವುದರಿಂದ ಪಾರ್ಕ್​ಗೆ ನೀರಿನ ಸಮಸ್ಯೆಯೂ ಉದ್ಭವಿಸದು. ಈಗಾಗಲೇ ಪಾರ್ಕ್​ ನಿರ್ಮಾಣಕ್ಕೆ ಅಗತ್ಯವಿರುವಷ್ಟು ಜಮೀನು ಸರ್ಕಾರದ್ದೇ ಇದೆ. ಹೀಗಾಗಿ ಸರ್ಕಾರಕ್ಕೆ ಆರ್ಥಿಕವಾಗಿ ಹೆಚ್ಚಿನ ಹೊರೆಯಾಗದು ಎಂದು ಶಾಸಕರು ವಿವರಣೆ ನೀಡಿದ್ದಾರೆ.

ಇದಕ್ಕೆ ಸಚಿವ ಶಂಕರ್ ಸ್ಪಂದಿಸಿದ್ದು, ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. ಸಭೆಯಲ್ಲಿ ತೀರ್ಮಾನ ಕೈಗೊಂಡು ಕನಕಗಿರಿಯಲ್ಲಿ ಪಾರ್ಕ್​ ಅನುಷ್ಠಾನಕ್ಕೆ ಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಶಾಸಕ ಬಸವರಾಜ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.