ETV Bharat / briefs

ನವೀಕೃತ ರೋಟರಿ ಬಿಜಿಎಸ್ ಆಸ್ಪತ್ರೆ ಲೋಕಾರ್ಪಣೆ

author img

By

Published : Jun 17, 2021, 9:49 PM IST

ಈಗ ಐಸಿಯು, ವೆಂಟಿಲೇಟರ್‌ ವ್ಯವಸ್ಥೆ ಇಲ್ಲಿದೆ. ಈ ಆಸ್ಪತ್ರೆಗೆ 15 ವೆಂಟಿಲೇಟರ್‌, ಮಾನಿಟರ್‌ಗಳನ್ನು ನೀಡಲಾಗಿದೆ. ಇನ್ನು 15 ಮಾನಿಟರ್‌ಗಳು ಬೇಕೆಂದು ಕೇಳಿದ್ದಾರೆ. ಅದನ್ನೂ ವೈಯಕ್ತಿಕವಾಗಿ ಒದಗಿಸುತ್ತೇನೆ ಎಂದು ಡಾ.ಸಿ.ಎನ್.‌ ಅಶ್ವತ್ಥ ನಾರಾಯಣ ಹೇಳಿದ್ದಾರೆ.

 Inauguration of Renewed Rotary BGS Hospital
Inauguration of Renewed Rotary BGS Hospital

ರಾಮನಗರ: ಕೋವಿಡ್‌ ಹೊರತುಪಡಿಸಿ ಸಾಮಾನ್ಯ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಿರುವ ನವೀಕೃತ ರೋಟರಿ ಬಿಜಿಎಸ್ ಆಸ್ಪತ್ರೆಯನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಲೋಕಾರ್ಪಣೆ ಮಾಡಿದರು.

ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, ಈ ಆಸ್ಪತ್ರೆ ಮೊದಲೇ ಇತ್ತು. ಈಗ ಅದನ್ನು ಮತ್ತಷ್ಟು ಉತ್ತಮಪಡಿಸಲಾಗಿದೆ. ಸೌಲಭ್ಯಗಳನ್ನು ಹೆಚ್ಚಿಸಲಾಗಿದೆ ಎಂದರು. ಈಗ ಐಸಿಯು, ವೆಂಟಿಲೇಟರ್‌ ವ್ಯವಸ್ಥೆ ಇಲ್ಲಿದೆ. ಈ ಆಸ್ಪತ್ರೆಗೆ 15 ವೆಂಟಿಲೇಟರ್‌, ಮಾನಿಟರ್‌ಗಳನ್ನು ನೀಡಲಾಗಿದೆ. ಇನ್ನು 15 ಮಾನಿಟರ್‌ಗಳು ಬೇಕೆಂದು ಕೇಳಿದ್ದಾರೆ. ಅದನ್ನೂ ವೈಯಕ್ತಿಕವಾಗಿ ಒದಗಿಸುತ್ತೇನೆ. ಇನ್ನು ಮುಂದೆ ರಾಮನಗರ ಜಿಲ್ಲೆಯ ಜನರು ಅನಾರೋಗ್ಯ ಉಂಟಾದ ಕೂಡಲೇ ಬೆಂಗಳೂರು ಕಡೆ ಓಡುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಪ್ರಸ್ತುತ ರಾಮನಗರ ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಪ್ರತ್ಯೇಕ ಕೋವಿಡ್‌ ಆಸ್ಪತ್ರೆ ಇದೆ. ತಾಯಿ ಮಕ್ಕಳ ಆಸ್ಪತ್ರೆ ಆರಂಭಿಸಲಾಗತ್ತಿದೆ. ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಬಂದಿದೆ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿ ಅವರಿಗೂ ಜಿಲ್ಲಾ ಕೇಂದ್ರದಲ್ಲಿ ಒಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದೇನೆ. ಬೆಂಗಳೂರಿನಲ್ಲಷ್ಟೇ ಅಲ್ಲ, ವಿದೇಶದಲ್ಲೂ ಸಿಗುವಂತಹ ಉತ್ತಮ ಆರೋಗ್ಯ ಸೇವೆ ರಾಮನಗರದಲ್ಲೂ ಸಿಗುತ್ತದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.