ETV Bharat / briefs

ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರಕ್ಕೆ ಇಚ್ಛಾಶಕ್ತಿ ಕೊರತೆ: ಸತೀಶ್​ ಜಾರಕಿಹೊಳಿ

author img

By

Published : Jul 5, 2021, 6:29 PM IST

ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ.

Lack of willingness of government to hold session in Belgaum: Satish Jarkiholi
Lack of willingness of government to hold session in Belgaum: Satish Jarkiholi

ಬೆಳಗಾವಿ: ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. ಈ ಸಂಬಂಧ ಜಿಲ್ಲೆಯ ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ, ಇಲ್ಲಿನ ಜನತೆ ಆಶೋತ್ತರಗಳಿಗೆ ನೆರವಾಗಬೇಕಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಆಡಳಿತ ಪಕ್ಷದ ನಾಯಕರಲ್ಲಿ ಹೊಂದಾಣಿಕೆ ಕೊರತೆ ಇದೆ ಎಂದು ಹೇಳಿದರು.

ಸರ್ಕಾರ ಯಾವುದೇ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಇಲ್ಲ. ಪರೀಕ್ಷೆ ನಡೆಸುವುದಾದ್ರೆ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿಯನ್ನು ನಡೆಸಲಿ. ಇಲ್ಲವಾದ್ರೆ ಎರಡನ್ನೂ ರದ್ದು ಮಾಡಬೇಕು. ವಿದ್ಯಾರ್ಥಿಗಳಿಗೆ ವಿನಾಃಕಾರಣ ಸಮಸ್ಯೆಯಾಗಬಾರದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.