ETV Bharat / business

ದೇಶದಲ್ಲಿ ಕೋವಿಡ್ ಉಲ್ಬಣ: ತಕ್ಷಣದಿಂದಲೇ ಲಸಿಕೆ, ಆಕ್ಸಿಜನ್ ಆಮದಿನ ಮೇಲಿನ ಸುಂಕ ತೆರವು!

author img

By

Published : Apr 24, 2021, 3:51 PM IST

oxygen
oxygen

ಕೋವಿಡ್ ಲಸಿಕೆಗಳನ್ನು ಆಮದು ಮಾಡಿಕೊಳ್ಳುವಲ್ಲಿ ಮೂಲ ಕಸ್ಟಮ್ಸ್ ಸುಂಕವನ್ನು 3 ತಿಂಗಳ ಅವಧಿಗೆ ನಿಷೇಧಿಸುವುದನ್ನು ತಕ್ಷಣದಿಂದ ಜಾರಿಗೊಳಿಸುವಂತೆ ಸಭೆಯಲ್ಲಿ ಸರ್ಕಾರ ನಿರ್ಧರಿಸಿದೆ. ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಲಭ್ಯತೆಯನ್ನು ಹೆಚ್ಚಿಸಲು ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕಾಗಿದೆ ಎಂದು ಸರ್ಕಾರ ಸೂಚನೆ ನೀಡಿದೆ.

ನವದೆಹಲಿ: ಮುಂದಿನ ಮೂರು ತಿಂಗಳ ಅವಧಿವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಆಕ್ಸಿಜನ್ ಸಂಬಂಧಿತ ಉಪಕರಣಗಳ ಆಮದು ಮೇಲಿನ ಕಸ್ಟಮ್ಸ್ ಸುಂಕ ಮತ್ತು ಆರೋಗ್ಯ ಸೆಸ್‌ನಿಂದ ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಡಾ.ಹರ್ಷ್​ವರ್ಧನ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಮನೆಯಲ್ಲಿ ಆಗಲಿ ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ದರ್ಜೆಯ ಆಮ್ಲಜನಕದ ಪೂರೈಕೆ ಮತ್ತು ರೋಗಿಗಳ ಆರೈಕೆಗೆ ಅಗತ್ಯವಾದ ಸಲಕರಣೆಗಳನ್ನು ತ್ವರಿತವಾಗಿ ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಕೋವಿಡ್ ಲಸಿಕೆಗಳನ್ನು ಆಮದು ಮಾಡಿಕೊಳ್ಳುವಲ್ಲಿ ಮೂಲಭೂತ ಕಸ್ಟಮ್ಸ್ ಸುಂಕವನ್ನು 3 ತಿಂಗಳ ಅವಧಿಗೆ ನಿಷೇಧಿಸುವುದನ್ನು ತಕ್ಷಣದಿಂದ ಜಾರಿಗೊಳಿಸುವಂತೆ ಸಭೆಯಲ್ಲಿ ಸರ್ಕಾರ ನಿರ್ಧರಿಸಿತು.

ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಲಭ್ಯತೆಯನ್ನು ಹೆಚ್ಚಿಸಲು ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕಾಗಿದೆ ಎಂದು ಸರ್ಕಾರ ಸೂಚನೆ ನೀಡಿದೆ.

ಸುಂಕ ಅಮಾನತು ನಿರ್ಧಾರಗಳು ವೈದ್ಯಕೀಯ ವಸ್ತುಗಳ ಲಭ್ಯತೆ ಹೆಚ್ಚಿಸುವುದರ ಜೊತೆಗೆ ಅವುಗಳನ್ನು ಅಗ್ಗವಾಗಿಸುತ್ತದೆ. ಔಷಧಿಯ ಸಲಕರಣೆಗಳ ತಡೆರಹಿತ ಮತ್ತು ತ್ವರಿತ ಕಸ್ಟಮ್ ಕ್ಲಿಯರೆನ್ಸ್ ಖಚಿತಪಡಿಸಿಕೊಳ್ಳಲು ಪ್ರಧಾನಿ ಕಂದಾಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಕಸ್ಟಮ್ಸ್ ಕ್ಲಿಯರೆನ್ಸ್‌ಗೆ ಸಂಬಂಧ ಕಂದಾಯ ಇಲಾಖೆ ಕಸ್ಟಮ್ಸ್ ಜಂಟಿ ಕಾರ್ಯದರ್ಶಿ ಗೌರವ್ ಮಸಲ್ಡಾನ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.