ETV Bharat / city

ಬೆಳಗಾವಿ ಸಿಸಿಬಿ ಪೊಲೀಸರ ಕಾರ್ಯಾಚರಣೆ : ಇಬ್ಬರು ಅಂತಾರಾಜ್ಯ ಪೆಡ್ಲರ್ ಅರೆಸ್ಟ್

author img

By

Published : Apr 11, 2022, 12:57 PM IST

Belagavi
ಬೆಳಗಾವಿ ಸಿಸಿಬಿ ಪೊಲೀಸರ ಕಾರ್ಯಾಚರಣೆ

ಗಾಂಜಾ ಪೂರೈಕೆ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಗಾಂಜಾ ಪೆಡ್ಲರ್​ಗಳನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಇವರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು..

ಬೆಳಗಾವಿ : ಜಿಲ್ಲೆಯ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತಾರಾಜ್ಯ ಗಾಂಜಾ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಮೀರಜ್​ನ ಫಾರೂಖ್ ಖಾನ್ (37) ಹಾಗೂ ಅಮನ್ ಜಮಾದಾರ್(20) ಬಂಧಿತ ಆರೋಪಿಗಳು. ಇವರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು.

ಬಂಧಿತರಿಂದ 8 ಕೆಜಿ 300 ಗ್ರಾಂ ಗಾಂಜಾ ಮತ್ತು 2 ಲಕ್ಷ ರೂಪಾಯಿ ನಗದು ಹಾಗೂ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಗೆ ಈ ಆರೋಪಿಗಳು ಗಾಂಜಾ ಸರಬರಾಜು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬೆಳಗಾವಿ ನಗರದ ಹೊರ ವಲಯದಲ್ಲಿ ಇಬ್ಬರನ್ನ ಬಂಧಿಸಿದ್ದಾರೆ.

ಬೆಳಗಾವಿ ಸಿಸಿಬಿ ಪೊಲೀಸರ ಕಾರ್ಯಾಚರಣೆ

ಇದನ್ನೂ ಓದಿ: ಡಿಕ್ಕಿ ಹೊಡೆದ ರೋಪ್ ​ವೇ ಕಾರುಗಳು, ಕೆಳಗೆ ಹಾರಿಬಿದ್ದ ದಂಪತಿ.. ಮಹಿಳೆ ಸಾವು, ಗಾಳಿಯಲ್ಲೇ ಸಿಲುಕಿದ್ರು 50 ಜನ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.