ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ನೂರರ ಗಡಿ ದಾಟಿದ ಕೋವಿಡ್ ಸೋಂಕಿತ ಪ್ರಕರಣಗಳು..!

author img

By

Published : Aug 6, 2022, 7:49 AM IST

Etv Bharat belagavi covid

Belagavi Corona Report : ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 331 ಸಕ್ರಿಯ ಪ್ರಕರಣಗಳಿದ್ದು, ಇನ್ನೂ 1449 ಜನರ ಕೋವಿಡ್ ವರದಿ ಬರಬೇಕಿದೆ.

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ‌ಕೋವಿಡ್ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಆಗಿ, ನೂರರ ಗಡಿ ದಾಟಿದೆ. ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಬುಲೆಟಿನ್​ನಲ್ಲಿ ಶುಕ್ರವಾರ 110 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ.

ಅಥಣಿಯಲ್ಲಿ 12, ಬೆಳಗಾವಿ ತಾಲೂಕಿನಲ್ಲಿ 14, ಹುಕ್ಕೇರಿ 02, ಚಿಕ್ಕೋಡಿ, ಗೋಕಾಕ, ಖಾನಾಪೂರ, ಸವದತ್ತಿ ತಾಲೂಕಿನಲ್ಲಿ ತಲಾ 5 ಸೋಂಕಿತ ಪ್ರಕರಣಗಳು ದಾಖಲಾಗಿದ್ದರೆ ರಾಮದುರ್ಗ ತಾಲೂಕಿನಲ್ಲಿ ಅತಿಹೆಚ್ಚು 62 ಸೋಂಕಿತ ಪ್ರಕರಣ ದಾಖಲಾಗಿವೆ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 331 ಸಕ್ರಿಯ ಪ್ರಕರಣಗಳಿದ್ದು, ಇನ್ನೂ 1449 ಜನರ ಕೋವಿಡ್ ವರದಿ ಬರಬೇಕಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಳೆದ ಒಂದು ವಾರಗಳಿಂದ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ‌ನಿರಂತರವಾಗಿ ಏರುತ್ತಿದ್ದು, ಅನಾಹುತ ಸಂಭವಿಸುವ ಮುನ್ನವೇ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.

Belagavi corona report,ಬೆಳಗಾವಿ ಜಿಲ್ಲೆಯ ಕೊರೊನಾ ವರದಿ
ಬೆಳಗಾವಿ ಜಿಲ್ಲೆಯ ಕೊರೊನಾ ವರದಿ

(ಇದನ್ನೂ ಓದಿ: ರೋಗಿಯ ಹೊಟ್ಟೆಯಲ್ಲಿ ಸಿಕ್ತು ಸ್ಟೀಲ್​ ಗ್ಲಾಸ್​; ವೈದ್ಯರಿಗೆ ಶಾಕ್)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.