ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಪಟ್ಟು: ಬಾರು ಕೋಲಿನಿಂದ ಮೈಗೆ ಹೊಡೆದುಕೊಂಡ ಕಾಂಗ್ರೆಸ್ ಕಾರ್ಯಕರ್ತೆ

author img

By

Published : Nov 26, 2021, 12:27 PM IST

Farmer women protest in Belagavi

ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸಿದ ರೈತ ಮಹಿಳೆಯರಿಗೆ ಕೈ ಕಾರ್ಯಕರ್ತೆಯರು ಸಾಥ್ ನೀಡಿದರು. ಕೈಯಲ್ಲಿ ಬಾರುಕೋಲು‌ ಹಿಡಿದು ಮೈಗೆ ಬಡಿದುಕೊಳ್ಳುತ್ತಾ ಕಾಂಗ್ರೆಸ್ ಕಾರ್ಯಕರ್ತೆ ಆಯೀಷಾ ಸನದಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ: ರಾಜ್ಯ ಸರ್ಕಾರ ಕೂಡ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ರೈತ ಮಹಿಳೆಯರು ಪ್ರತಿಭಟನೆ ನಡೆಸಿದರು.

ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಪಟ್ಟು: ಬಾರು ಕೋಲಿನಿಂದ ಮೈಗೆ ಹೊಡೆದುಕೊಂಡ ಕಾಂಗ್ರೆಸ್ ಕಾರ್ಯಕರ್ತೆ

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸಿದ ರೈತ ಮಹಿಳೆಯರಿಗೆ ಕೈ ಕಾರ್ಯಕರ್ತೆಯರು ಸಾಥ್ ನೀಡಿದರು. ಕೈಯಲ್ಲಿ ಬಾರುಕೋಲು‌ ಹಿಡಿದು ಮೈಗೆ ಬಡಿದುಕೊಳ್ಳುತ್ತಾ ಕಾಂಗ್ರೆಸ್ ಕಾರ್ಯಕರ್ತೆ ಆಯೀಷಾ ಸನದಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನುಳಿದ ಮಹಿಳೆಯರು ಬೊಬ್ಬೆ ಹೊಡೆಯುತ್ತಾ ಬಾರು ಕೋಲಿನಿಂದ ಹೊಡೆದುಕೊಳ್ಳುತ್ತಾ ವಿನೂತನ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತೆ ಹಾಗೂ ರೈತ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತೆ ಆಯೀಶಾ ಹೈಡ್ರಾಮಾ ನಡೆಸಿದರು. ಹೆದ್ದಾರಿ ಮೇಲೆ ಮಲಗಲು ಯತ್ನಿಸಿದ ಆಯೀಷಾ ಸನದಿಯ ಕೈ-ಕಾಲು ಹಿಡಿದು ಮಹಿಳಾ ಪೊಲೀಸರು ಪೊಲೀಸ್ ವಾಹನದಲ್ಲಿ ಕೂರಿಸಿದರು.

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ಗೆ ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಳಗಾವಿ ತಾಲೂಕು ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಖ್ಯಾತ ವಿದ್ವಾಂಸ ಕೆ.ಎಸ್ ನಾರಾಯಣಾಚಾರ್ಯ ನಿಧನ: ಸಿಎಂ ಸೇರಿ ಗಣ್ಯರಿಂದ‌ ಸಂತಾಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.