ETV Bharat / city

ಕೇಂದ್ರ ಬಜೆಟ್​​ನಲ್ಲಿ ದೇಶದ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ: ಡಿಸಿಎಂ ಲಕ್ಷ್ಮಣ್ ಸವದಿ

author img

By

Published : Feb 1, 2020, 2:05 PM IST

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್​​ನಲ್ಲಿ ದೇಶದ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

DCM Laxman Sawadi
ಡಿಸಿಎಂ ಲಕ್ಷ್ಮಣ್ ಸವದಿ

ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್​​ನಲ್ಲಿ ದೇಶದ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಬಜೆಟ್​​ನಲ್ಲಿ ದೇಶದ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ: ಡಿಸಿಎಂ ಲಕ್ಷ್ಮಣ್ ಸವದಿ

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ರೈತರ ಆದಾಯ ದ್ವಿಗುಣ ಆಗಬೇಕು. ಆ ನಿಟ್ಟಿನಲ್ಲಿ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ. ರೈತರ ಉತ್ಪನ್ನ ದ್ವಿಗುಣಕ್ಕಾಗಿ ನಬಾರ್ಡ್​ನಿಂದ 16 ಲಕ್ಷ ಕೋಟಿ ರೂ. ಪ್ರೋತ್ಸಾಹ ದನ ನೀಡಲು ಘೋಷಿಸಲಾಗಿದೆ‌. ದೇಶದಲ್ಲಿ ರೈತರಿಗೆ ಅನುಕೂಲ ಕಲ್ಪಿಸಲು ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಲಾಗಿದೆ. ಕೃಷಿಗೆ ಉಪಯುಕ್ತವಲ್ಲದ ಭೂಮಿಯಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಒತ್ತು ನೀಡಲಾಗಿದೆ ಎಂದರು.

ರೈತರು ಸ್ವಾಭಿಮಾನ ಬದುಕು ಕಟ್ಟಿಕೊಳ್ಳಬೇಕು. ತನ್ನ ಕಾಲ ಮೇಲೆ ನಿಲ್ಲಬೇಕು ಎಂಬೆಲ್ಲ ಸಂಗತಿ ಪರಿಗಣಿಸಿ, ರೈತರಿಗೆ ಹಲವು ಯೋಜನೆ ಘೋಷಿಸಲಾಗಿದೆ. ಜಿಡಿಪಿ ಹೆಚ್ಚಿಸಲು ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ರೈಲ್ವೆ ಯೋಜನೆ, ಸಾರಿಗೆ ಇಲಾಖೆ, ಕೃಷಿಗೆ ಪೂರಕ ಬಜೆಟ್ ಇದಾಗಿದ್ದು, ದೇಶದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇಂಥ ಬಜೆಟ್ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದಿಸುತ್ತೇನೆ ಎಂದು ಡಿಸಿಎಂ ಹೇಳಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.