ETV Bharat / city

ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ

author img

By

Published : Dec 20, 2021, 4:30 PM IST

ಯಾರ್ಯಾರು ಏನೇನು ಹೇಳಿದ್ದಾರೋ ಅವರವರಿಗೆ ಬಿಟ್ಟದ್ದು. ನಾನು ಸ್ಪಷ್ಟವಾಗಿ ಹೇಳುತ್ತೇನೆ. ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು..

Minister Kota Srinivas Poojary
ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಬೆಳಗಾವಿ : ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸುವರ್ಣ ಸೌಧದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾಯಕತ್ವದಲ್ಲಿ ಎಲ್ಲವೂ ನಡೆಯಲಿದೆ. ಆಡಳಿತಾತ್ಮಕವಾಗಿ ಸಿಎಂ, ಕ್ಷೇತ್ರದಲ್ಲಿ ಕುಟುಂಬದ ಸದಸ್ಯ ಅಂತಾ ಹೇಳಿದ್ರು. ಅದರಲ್ಲಿ ಪ್ರೀತಿ ಮತ್ತು ಭಾವುಕ ವಿಚಾರದ ಬಗ್ಗೆ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿರುವುದು..

ರಾಜ್ಯದ ಬೆಳವಣಿಗೆಗಾಗಿ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ. ಯಾರ್ಯಾರು ಏನೇನು ಹೇಳಿದ್ದಾರೋ ಅವರವರಿಗೆ ಬಿಟ್ಟದ್ದು. ನಾನು ಸ್ಪಷ್ಟವಾಗಿ ಹೇಳುತ್ತೇನೆ. ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದರು.

ಎಂಇಎಸ್ ಪುಂಡಾಟಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಭಾಷೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವುದು ಸರಿಯಲ್ಲ. ಪುಂಡಾಟವನ್ನು ಕಾನೂನು ರೀತಿಯಲ್ಲೇ ಕ್ರಮಕೈಗೊಂಡು ಬಗೆಹರಿಸಲಿದ್ದೇವೆ ಎಂದರು.

ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು : ಯಾವುದೂ ಶಾಶ್ವತವಲ್ಲ, ಈ ಬದುಕು ಕೂಡ ಶಾಶ್ವತವಲ್ಲ. ನಾವು ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ, ಸ್ಥಾನಮಾನ ಶಾಶ್ವತವಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ.

ಶಿಗ್ಗಾಂವಿ ಕ್ಷೇತ್ರದ ಹೊರಗೆ ಇದ್ದಾಗ ನಾನು ಸಿಎಂ. ಕ್ಷೇತ್ರಕ್ಕೆ ಬಂದಾಗ ನಿಮ್ಮ ಬಸವರಾಜ ಬೊಮ್ಮಾಯಿ ಆಗಿರುವೆ ಎಂದು ಶಿಗ್ಗಾಂವಿ ಪಟ್ಟಣದಲ್ಲಿ ನಡೆದ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಬೆಳಗಾವಿಯ ಅಧಿವೇಶನದಲ್ಲಿ ನಾಳೆಯೇ ಮತಾಂತರ ನಿಷೇಧ ಕಾಯ್ದೆ ಮಂಡನೆ : ಸಚಿವ ಸಂಪುಟ ತೀರ್ಮಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.