ಪರಿಷತ್ ಚುನಾವಣೆ ಜಯ: ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದ ಲಕ್ಷ್ಮಿ ಹೆಬ್ಬಾಳ್ಕರ್​, ಚನ್ನರಾಜ ಹಟ್ಟಿಹೊಳಿ

author img

By

Published : Dec 16, 2021, 12:49 AM IST

MLA laxmi hebbalkar Thanks

ಬೆಳಗಾವಿಯಲ್ಲಿ ಸ್ಪರ್ಧಿಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಬೆಳಗಾವಿ : ವಿಧಾನ ಪರಿಷತ್​​ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಸಹಕರಿಸಿದ ಎಲ್ಲರಿಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​​ ಹಾಗೂ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ಟಿಕೆಟ್ ಘೋಷಣೆಯಿಂದ ಆರಂಭವಾಗಿ ಆಯ್ಕೆಯಾಗುವವರೆಗೂ ಹಲವಾರು ಜನರು ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದಿದ್ದಾರೆ.

ಧನ್ಯವಾದ ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್​, ಚನ್ನರಾಜ ಹಟ್ಟಿಹೊಳಿ

ಎಲ್ಲ ಮತದಾರರು, ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಜಿಲ್ಲೆಯ ಮುಖಂಡರಾದ ಪ್ರಕಾಶ್​ ಹುಕ್ಕೇರಿ, ಎ.ಬಿ.ಪಾಟೀಲ್​, ವೀರಕುಮಾರ್ ಪಾಟೀಲ್​, ಅಶೋಕ ಪಟ್ಟಣ, ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: lakhimpur kheri violence: ಪತ್ರಕರ್ತನೊಂದಿಗೆ ಅಸಭ್ಯವಾಗಿ ವರ್ತಿಸಿದ ಕೇಂದ್ರ ಸಚಿವ

ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು. ಮುಂದೆ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಲಕ್ಷ್ಮಿ ಹೆಬ್ಬಾಳ್ಕರ್​​ ಹಾಗೂ ಚನ್ನರಾಜ ಹಟ್ಟಿಹೊಳಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.