ETV Bharat / city

ಸಿದ್ದರಾಮಯ್ಯ ವೇಸ್ಟ್ ಬಾಡಿ, ಅವನದ್ದು ಮುಗಿದ ಕಥೆ : ಮಾಜಿ ಸಚಿವ ರಮೇಶ್ ಜಾರಕಿಹೊಳಿ

author img

By

Published : Dec 15, 2021, 12:44 PM IST

Ramesh Jarkiholi
ಗೋಕಾಕ್​ನಲ್ಲಿ ಮಾಧ್ಯಮದವರಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ

ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ, ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ. ಸಿದ್ದರಾಮಯ್ಯ ವೇಸ್ಟ್ ಬಾಡಿ. ಅವನದ್ದು ಮುಗಿದ ಕಥೆ, ಮುಂದಿನ ಬಾರಿ ಸೋಲ್ತಾನೆ ಎಂದು ಸಿದ್ದು ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ‌ ವಾಗ್ದಾಳಿ ನಡೆಸಿದರು.

ಬೆಳಗಾವಿ : ಸಿದ್ದರಾಮಯ್ಯನನ್ನು ಕುರುಬರೆಲ್ಲರೂ ರಿಜೆಕ್ಟ್ ಮಾಡಿದ್ದಾರೆ.‌ ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಸೋಲುತ್ತಾನೆ ಎಂದು ಏಕವಚನದಲ್ಲಿ ಶಾಸಕ ರಮೇಶ್ ಜಾರಕಿಹೊಳಿ‌ ವಾಗ್ದಾಳಿ ನಡೆಸಿದರು.

ರಮೇಶ್ ಜಾರಕಿಹೊಳಿ‌ ವಿರುದ್ಧ ಕ್ರಮಕೈಗೊಳ್ಳಿ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಗೋಕಾಕ್​ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ.

ಹೀಗಾಗಿ, ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ. ಸಿದ್ದರಾಮಯ್ಯ ವೇಸ್ಟ್ ಬಾಡಿ. ಅವನದ್ದು ಮುಗಿದ ಕಥೆ, ಮುಂದಿನ ಬಾರಿ ಸೋಲ್ತಾನೆ ಎಂದು ಸಿದ್ದು ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ‌ ವಾಗ್ದಾಳಿ ನಡೆಸಿದರು.

ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಸೋಲಿನ ಕುರಿತಂತೆ ಗೋಕಾಕ್​ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿರುವುದು..

ನಮ್ಮ ಪಕ್ಷದಲ್ಲಿ ಏನಾಗಿದೆ ಏನಿಲ್ಲ ಎಂಬುದು ನಮ್ಮ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಯಾಕೆ ಸೋತಿದೆ ಎಂಬುದು ಚರ್ಚೆ ಮಾಡಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ‌. ಡಿ ಕೆ ಶಿವಕುಮಾರ್ ಬಗ್ಗೆ ಬಹಳ ಕಠೋರವಾಗಿ ಹೇಳುವವನಿದ್ದೆ.

ಕೊನೆಯ ಮೂರು ದಿನಗಳಲ್ಲಿ ಜಿಲ್ಲೆಯ ಚಿತ್ರಣ ಬದಲಾಯಿತು. ಬಿಜೆಪಿಗೆ ಹೋಗುವ ಕುರಿತು ಲಖನ್ ಜಾರಕಿಹೊಳಿ‌ ತೀರ್ಮಾನ ತೆಗೆದುಕೊಳ್ಳಬೇಕು. ಲಖನ್ ಜಾರಕಿಹೊಳಿ‌ ಕೊನೆಯ ಮೂರು ದಿನ ನಮ್ಮ ಕೈಗೆ ಸಿಗಲಿಲ್ಲ. ಚುನಾವಣೆ ಚಿತ್ರಣ ಬದಲಾಗಿದ್ದಕ್ಕೆ ನಾನು ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಿದೆ ಎಂದರು‌.

ಬಿಜೆಪಿ ಸೋಲನ್ನ ರಮೇಶ್ ಜಾರಕಿಹೊಳಿ‌ ತಲೆಗೆ ಕಟ್ಟುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಗುಡ್ಡಕ್ಕೆ ಶಕ್ತಿ ಹೊರುವ ತಾಕತ್ತು ಇದೆ. ಸೋಲಿನ ಪಟ್ಟವನ್ನು ಲೀಡರ್ ಆದವರಿಗೆ ಕಟ್ಟುತ್ತಾರೆ. ನಾನು ಕಾಂಗ್ರೆಸ್ ಸೋಲಿಸುತ್ತೇನೆ ಅಂತಾ ಹಠಕ್ಕೆ ಬಿದ್ದಿದ್ದು ನಿಜ.

ಇವತ್ತು ಅವರ ಪಕ್ಷ ಗೆದ್ದಿದೆ. ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಎಲ್ಲಿ ತಪ್ಪಿದೆ ಎಂಬುದು ಆಂತರಿಕವಾಗಿ ಚರ್ಚೆ ಮಾಡುತ್ತೇವೆ. ಕೆಲವೇ ದಿನಗಳಲ್ಲಿ ಬಹಿರಂಗವಾಗಿ ಡಿಕೆಶಿ ಹೇಳಿಕೆ ಬಗ್ಗೆ ಕಠೋರ ಉತ್ತರ ಕೊಡುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.