ETV Bharat / city

ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವಂತೆ ಬಳ್ಳಾರಿ ಬಿಜೆಪಿ ಯುವ ಮೋರ್ಚಾ ಮನವಿ

author img

By

Published : Sep 11, 2020, 2:27 PM IST

ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಭಾಗಿಯಾಗಿದ್ದರು ಅವರಿಗೆ ಕಠಿಣ ಶಿಕ್ಷೆ ನೀಡಬೇಕು, ಹಾಗೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬಳ್ಳಾರಿ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮನವಿ ಮಾಡಿದರು.

Bellary BJP Yuva Morcha appeals to make drugs free Karnataka
ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವಂತೆ ಬಳ್ಳಾರಿ ಬಿಜೆಪಿ ಯುವ ಮೋರ್ಚಾ ಮನವಿ

ಬಳ್ಳಾರಿ: ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಕ್ಕಾಗಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷರ ಆದೇಶದ ಮೇರೆಗೆ ಬಳ್ಳಾರಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿಂದು ಬೆಳಗ್ಗೆ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.

Bellary BJP Yuva Morcha appeals to make drugs free Karnataka
ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವಂತೆ ಬಳ್ಳಾರಿ ಬಿಜೆಪಿ ಯುವ ಮೋರ್ಚಾ ಮನವಿ

ಬಳ್ಳಾರಿ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆರ್. ಸೋಮಶೇಖರ್ ಮಾತನಾಡಿ, ಕಳೆದ ಕೆಲವು ದಿನಗಳಿಂದ ರಾಜ್ಯದ ನೆಮ್ಮದಿ ಮತ್ತು ಹೆಸರನ್ನು ಕೆಡಿಸಿದ್ದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆ ವಿರುದ್ಧ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ, ಗೃಹ ಸಚಿವಾಲಯ, ಪೊಲೀಸ್ ಇಲಾಖೆ ಉತ್ತಮ ಕೆಲಸ ಮಾಡುತ್ತಿದೆ. ಅದಕ್ಕೆ ಬಿಜೆಪಿ ಯುವ ಮೋರ್ಚಾ ಅಭಿನಂದನೆ ಸಲ್ಲಿಸುತ್ತದೆ ಎಂದರು.

Bellary BJP Yuva Morcha appeals to make drugs free Karnataka
ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವಂತೆ ಬಳ್ಳಾರಿ ಬಿಜೆಪಿ ಯುವ ಮೋರ್ಚಾ ಮನವಿ

ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಭಾಗಿಯಾಗಿದ್ದರು ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೇ ನಿಷ್ಪಕ್ಷಪಾತ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.