ETV Bharat / city

ಬುಡಾ ಅಧ್ಯಕ್ಷರ ನೇಮಕಕ್ಕೆ ವಿರೋಧ: ರಾಜೀನಾಮೆ ನೀಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ

author img

By

Published : Oct 26, 2019, 10:40 AM IST

Updated : Oct 26, 2019, 10:45 AM IST

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇಮಕಕ್ಕೆ ಅಸಮಾಧಾನಗೊಂಡ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ರಾಜೀನಾಮೆ

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಮುರಹರಗೌಡ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬುಡಾ ಅಧ್ಯಕ್ಷ ಹುದ್ದೆಗೆ ಶೇಖರ್‌ ಅವರನ್ನು ನಾಮನಿರ್ದೇಶನ ಮಾಡಿರುವ ಸರ್ಕಾರದ ಕ್ರಮವು ನಮ್ಮ ಮನಸ್ಸಿಗೆ ನೋವುಂಟು ಮಾಡಿದ್ದು, ಅದರಿಂದ ಪಕ್ಷದ ಕಾರ್ಯಕರ್ತರಿಗೆ ಉತ್ತರ ನೀಡಲು ಕಷ್ಟವಾಗುತ್ತಿದೆ. ಪಕ್ಷ ಸಂಘಟನೆಗೆ ಹೋದಲ್ಲೆಲ್ಲಾ ವೈಯಕ್ತಿಕವಾಗಿ ಮುಜುಗರ ಅನುಭವಿಸಬೇಕಾಗುತ್ತೆ.‌ ಹಾಗಾಗಿ ಈ ರಾಜೀನಾಮೆ ಪತ್ರವನ್ನು ಕೂಡಲೇ ಅಂಗೀಕರಿಸಬೇಕೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದಾರೆ.

BJP district unit president resigned
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ರಾಜೀನಾಮೆ ಪತ್ರ

ಬಿಜೆಪಿಯಲ್ಲಿ ಮೂಲ-ವಲಸಿಗರ ನಡುವೆ ಶೀತಲ ಸಮರ:
ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮತ್ತು ರೆಡ್ಡಿ ಸಹೋದರರು ಹಾಗೂ ಮೂಲ ಬಿಜೆಪಿಗರ ನಡುವೆ ಶೀತಲ ಸಮರ ಶುರುವಾಗಿದೆ. ಶ್ರೀರಾಮುಲು, ರೆಡ್ಡಿ ಸಹೋದರ ಬಳಗದ ಆಪ್ತರಾದ ದಮ್ಮೂರು ಶೇಖರ್ ಅವರನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ‌ ಮಾಡಿರೋದು ಮೂಲ ಬಿಜೆಪಿಗರನ್ನು ಕೆರಳಿಸಿದೆ.

ಹಾಲಿ ಬುಡಾ ಅಧ್ಯಕ್ಷರಾಗಿ ನೇಮಕಗೊಂಡಿರುವ ದಮ್ಮೂರು ಶೇಖರ ಬಳ್ಳಾರಿ ಮೂಲದವರಾಗಿದ್ದರೂ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಲ್ಲ. ಸಚಿವ ಬಿ.ಶ್ರೀರಾಮುಲು ಮತ್ತು ರೆಡ್ಡಿ ಸಹೋದರರ ಬಳಗದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಅವರನ್ನು ಹುದ್ದೆಗೆ ನಾಮನಿರ್ದೇಶನ ಮಾಡಿರೋದು ಪ್ರಾಮಾಣಿಕ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂಬ ದೂರು ಪಕ್ಷದ ಮೂಲನಿವಾಸಿಗರದ್ದಾಗಿದೆ.

Intro:ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇಮಕಕ್ಕೆ ವಿರೋಧ: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ರಾಜೀನಾಮೆ!
ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಮುರಹರಗೌಡ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಸದ್ಯ ಬಳ್ಳಾರಿಯಲ್ಲಿ ನಾಮನಿರ್ದೇಶನ ಮಾಡಿರುವ ಸರ್ಕಾರದ ಕ್ರಮವು ನಮಗೆ ಮನಸ್ಸಿಗೆ ನೋವುಂಟು ಮಾಡಿದ್ದು, ಅದರಿಂದ ಪಕ್ಷದ ಕಾರ್ಯಕರ್ತರಿಗೆ ಉತ್ತರ ನೀಡಲು ಕಷ್ಟಕರವಾಗುತ್ತೆ. ಪಕ್ಷ ಸಂಘಟನೆಗೆ ಹೋದ ಕಡೆಗಳೆಲ್ಲಾ ನಾವು ವೈಯಕ್ತಿಕವಾಗಿ ಮುಜು ಗರ ಅನುಭವಿಸಬೇಕಾಗುತ್ತೆ.‌ ಆಗಾಗಿ, ನಮ್ಮ ಈ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
Body:ಮೂಲ - ವಲಸಿಗರ ನಡುವೆ ಶೀತಲ ಸಮರ: ಆರೋಗ್ಯ
ಮತ್ತು‌ ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮತ್ತು
ರೆಡ್ಡಿ ಸಹೋದರರ ಹಾಗೂ ಮೂಲ ಬಿಜೆಪಿಗರ ನಡುವೆ ಶೀತಲ ಸಮರ ಶುರುವಾಗಿದೆ. ಶ್ರೀರಾಮುಲು, ರೆಡ್ಡಿ ಸಹೋದರ ಬಳಗದ ಆಪ್ತರಾದ ದಮ್ಮೂರು ಶೇಖರ್ ಅವರನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ‌ ಮಾಡಿರೋದು ಮೂಲ ಬಿಜೆಪಿಗರನ್ನು ಕೆರಳಿಸಿದೆ. ಆಗಾಗಿ, ಇಂದು ಹುಬ್ಬಳ್ಳಿಯಲ್ಲಿ ನಡೆಯಲಿರೊ ಬಿಜೆಪಿ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕಟೀಲ್ ಅವರಿಗೆ ಬಳ್ಳಾರಿ ಜಿಲ್ಲಾ ಘಟಕದ ಚನ್ನಬಸವಗೌಡ ಪಾಟೀಲರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆಂಬ ಸುದ್ದಿಯು ಹಬ್ಬಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಹರಿಬಿಟ್ಟಿದ್ದಾರೆ.
ಹಾಲಿ ಬುಡಾ ಅಧ್ಯಕ್ಷರಾಗಿ ನೇಮಕಗೊಂಡಿರುವ ದಮ್ಮೂರು ಶೇಖರ ಅವರು ಬಳ್ಳಾರಿ ಮೂಲದವರಾಗಿದ್ದರೂ ಪಕ್ಷದಲ್ಲಿ
ಸಕ್ರಿಯ ಕಾರ್ಯಕರ್ತರಲ್ಲ. ಸಚಿವ ಬಿ.ಶ್ರೀರಾಮುಲು ಮತ್ತು ರೆಡ್ಡಿ ಸಹೋದರರ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ನಾಮನಿರ್ದೇಶನ ಮಾಡಿರೋದು ಪ್ರಾಮಾಣಿಕ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ದೂರುತ್ತಾರೆ ಮೂಲ ಬಿಜೆಪಿಗರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_BJP_DIST_PRESIDENT_REGIONED_7203310

KN_BLY_1a_BJP_DIST_PRESIDENT_REGIONED_7203310
Last Updated : Oct 26, 2019, 10:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.