ETV Bharat / city

ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು..

author img

By

Published : Sep 22, 2019, 5:48 PM IST

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಸಚಿವರ ವಿರುದ್ಧ ಕಾಂಗ್ರೆಸ್ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕರು ದೂರು

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಸಚಿವರ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕರಿಂದ ದೂರು..

ಶೇಷಾದ್ರಿಪುರಂ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ದೂರು ಸಲ್ಲಿಕೆ ಮಾಡಿ ಮಾತನಾಡಿದ ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ‌ಚಟುವಟಿಕೆ ಕುರಿತು ಸಭೆ‌ ಮಾಡಿದ್ದ ಆರೋಪದಡಿಯಲ್ಲಿ ದೂರು ಸಲ್ಲಿಸಿದ್ದೇವೆ. ವಿಧಾನಸೌಧದಲ್ಲಿ ಜೆ ಪಿ ನಡ್ಡಾ ಜೊತೆಗೆ ವಿಡಿಯೋ ‌ಸಂವಾದ ನಡೆಸಿದ್ದ ಸಿಎಂ ಬಿಎಸ್​​ವೈ ಕ್ರಮ ಪ್ರಶ್ನಿಸಿ ನೀತಿ ಸಂಹಿತೆ ಉಲ್ಲಂಘನೆ ಅಡಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ಸಿಕ್ಕಿದೆ ಎಂದರು.

ಉಪ ಚುನಾವಣೆ ಘೋಷಣೆ ಬಳಿಕ ಸಿಎಂ ಯಡಿಯೂರಪ್ಪ ಮತ್ತು ಸಚಿವರು ಸರ್ಕಾರಿ ಕಚೇರಿಯಲ್ಲಿ ಮತ್ತು ಫಾರೆಸ್ಟ್ ಗೆಸ್ಟ್ ಹೌಸ್​ನಲ್ಲಿ ಅನರ್ಹರ ಜೊತೆ ರಾಜಕೀಯ ಸಭೆ ನಡೆಸಿದ್ದಾರೆ. ಅಲ್ಲದೇ ಅಡ್ವೋಕೇಟ್ ಜನರಲ್ ಅವರನ್ನು ಕರೆದುಕೊಂಡು ಮಾತನಾಡಿದ್ದಾರೆ. ವಿಧಾನಸೌಧದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಜೊತೆಗೆ ವಿಡಿಯೋ ‌ಸಂವಾದ ನಡೆಸಿದ್ದಾರೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದೆ. ಸಿಎಂ ಯಡಿಯೂರಪ್ಪ ಮತ್ತು ಸಚಿವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ ಎಂದು ಉಗ್ರಪ್ಪ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಥೋಡ್ ಮಾತನಾಡಿ, ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಹಾಗೂ ಅಲ್ಲಿಗೆ ಜಮಖಂಡಿ ಶಾಸಕ ಆನಂದ ನ್ಯಾಮಗೌಡರು ಬೃಹತ್ ಮೆರವಣಿಗೆ ಮೂಲಕ ಆಗಮಿಸಲಿದ್ದು, ಎರಡು ಕಾರ್ಯಕ್ರಮಗಳಿಗೆ ಚುನಾವಣಾ ಆಯೋಗದ ಪರವಾನಗಿ ಕೇಳಿದ್ದು ಸಮ್ಮತಿ ಸಿಕ್ಕಿದೆ ಎಂದರು.

Intro:newsBody:ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಕಾಂಗ್ರೆಸ್ ನಾಯಕರ ದೂರು

ಬೆಂಗಳೂರು: ಉಪಚುನಾವಣೆ ಘೋಷಣೆ ಬಳಿಕ ಸಿಎಂ ಬಿಎಸ್ ವೈ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಲಾಗಿದೆ.
ಕಾಂಗ್ರೆಸ್ ಮುಖಂಡರಿಂದ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಕೆಯಾಗಿದ್ದು, ಮಾಜಿ ಸಂಸದ ವಿಎಸ್ ಉಗ್ರಪ್ಪ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ಸಲ್ಲಿಕೆ ಮಾಡಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಸಚಿವರ ವಿರುದ್ಧ ದೂರು ಸಲ್ಲಿಕೆಯಾಗಿದೆ.
ಸರ್ಕಾರದ ಕಚೇರಿಗಳಲ್ಲಿ ರಾಜಕೀಯ ‌ಚಟುವಟಿಕೆ ಕುರಿತು ಸಭೆ‌ ಮಾಡಿದ್ದ ಆರೋಪದಡಿಯಲ್ಲಿ ದೂರು ಸಲ್ಲಿಸಿದ್ದೇವೆ. ವಿಧಾನಸೌಧದಲ್ಲಿ ಜೆ ಪಿ ನಡ್ಡಾ ಜೊತೆಗೆ ವೀಡಿಯೋ ‌ಸಂವಾದ ನಡೆಸಿದ್ದ ಸಿಎಂ ಬಿಎಸ್ ವೈ ಕ್ರಮ ಪ್ರಶ್ನಿಸಿ ದೂರು ಸಲ್ಲಿಸಿದ್ದೇವೆ. ಹೀಗಾಗಿ ಚುನಾವಣಾಧಿಕಾರಿಗೆ ನೀತಿ ಸಂಹಿತೆ ಉಲ್ಲಂಘನೆ ದೂರು ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ಸಿಕ್ಕಿದೆ ಎಂದರು.

ಉಪಚುನಾವಣೆ ಘೋಷಣೆ ಬಳಿಕ ಸಿಎಂ ಬಿಎಸ್ ವೈ ಯಡಿಯೂರಪ್ಪ ನವರು ಮತ್ತು ಸಚಿವರು ಸರ್ಕಾರಿ ಕಚೇರಿಯಲ್ಲಿ ಮತ್ತು ಫಾರೆಸ್ಟ್ ಗೆಸ್ಟ್ ಹೌಸ್ ನಲ್ಲಿ ರಾಜಕೀಯ ಸಭೆ ನಡೆಸಿದ್ದಾರೆ. ಅನರ್ಹರ ಜೊತೆ ಫಾರೆಸ್ಟ್ ಗೆಸ್ಟ್ ಹೌಸ್ ನಲ್ಲಿ ಸಭೆ ನಡೆಸಿದ್ದಾರೆ. ಅಡ್ವೋಕೇಟ್ ಜನರಲ್ ಅವರನ್ನು ಕರೆದುಕೊಂಡು ಮಾತನಾಡಿದ್ದಾರೆ. ವಿಧಾನಸೌಧದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ ಜೊತೆಗೆ ವೀಡಿಯೋ ‌ಸಂವಾದ ನಡೆಸಿದ್ದಾರೆ. ಇದು ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆ ಯಾಗಲಿದೆ. ಸಿಎಂ ಯಡಿಯೂರಪ್ಪ ಮತ್ತು ಸಚಿವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ ಎಂದರು.
ವಿಧಾನಪರಿಷತ್ ಸದಸ್ಯ ಪ್ರಕಾಶ ರಾಥೋಡ್ ಮಾತನಾಡಿ, ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಹಾಗೂ ಅಲ್ಲಿಗೆ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಬೃಹತ್ ಮೆರವಣಿಗೆ ಮೂಲಕ ಆಗಮಿಸಲಿದ್ದು ಎರಡು ಕಾರ್ಯಕ್ರಮಗಳಿಗೆ ಚುನಾವಣಾ ಆಯೋಗದ ಪರವಾನಗಿ ಕೇಳಿದ್ದು ಸಮ್ಮತಿ ಸಿಕ್ಕಿದೆ ಎಂದರು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.