ETV Bharat / city

ನೋಡಿಯೂ ಸುಮ್ನಿರಬೇಡಿ.. ಎಲ್ಲೆಂದರಲ್ಲಿ ಕಸ ಎಸೆದವರ ಮಾಹಿತಿ ಕೊಟ್ರೆ ಬಿಬಿಎಂಪಿಯಿಂದ ಸಿಗುತ್ತೆ ಪ್ರಶಸ್ತಿ

author img

By

Published : Jun 28, 2022, 8:08 AM IST

ಬೆಂಗಳೂರು ಸ್ವಚ್ಛತೆ ಕಾಪಾಡಲು ಬಿಬಿಎಂಪಿ ಹೊಸ ಹೆಜ್ಜೆ ಇರಿಸಿದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿ ಕಸ ಎಸೆಯುವವರನ್ನು ಹಿಡಿಯಲು ಸಾರ್ವಜನಿಕರಿಗೇ ಅವಕಾಶ ಕಲ್ಪಿಸಿದೆ.

ಬೆಂಗಳೂರು ಕಸ
ಬೆಂಗಳೂರು ಕಸ

ಬೆಂಗಳೂರು: ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ತಂದು ಸುರಿದು ಮಾಲಿನ್ಯ ಉಂಟು ಮಾಡುವವರಿಗೆ ಬಿಬಿಎಂಪಿ ಬುದ್ಧಿ ಕಲಿಸಲು ಮುಂದಾಗಿದೆ. ಇನ್ಮುಂದೆ ಬೇಕಾಬಿಟ್ಟಿ ಕಸ ಎಸೆಯುವವರನ್ನು ತೋರಿಸಿಕೊಟ್ಟರೆ ಪಾಲಿಕೆಯಿಂದ ಪ್ರಶಂಸಾ ಪತ್ರ(ಅಪ್ರಿಸಿಯೇಷನ್ ಸರ್ಟಿಫಿಕೇಟ್) ಸಿಗಲಿದೆ.

ಕಂಡಕಂಡಲ್ಲಿ ಕಸ, ತ್ಯಾಜ್ಯ ಎಸೆಯುವುದರಿಂದ ನಗರದ ರಸ್ತೆಗಳು ಗಬ್ಬು ನಾರುತ್ತಿವೆ. ಈಗಾಗಲೇ ದಂಡ ಪ್ರಯೋಗ, ಮಾರ್ಷಲ್​ಗಳು ಎಚ್ಚರಿಕೆ ನೀಡಿದರೂ ಸಾರ್ವಜನಿಕರು ಅಸಡ್ಡೆ ತೋರುತ್ತಿದ್ದಾರೆ. ಹೀಗಾಗಿ ಹೊಸ ಅಸ್ತ್ರ ಪ್ರಯೋಗ ಮಾಡಲು ಪಾಲಿಕೆ ಹೆಜ್ಜೆ ಇಟ್ಟಿದೆ.

ಸಿಲಿಕಾನ್ ಸಿಟಿಯಲ್ಲಿ 1500ಕ್ಕೂ ಅಧಿಕ ರಸ್ತೆ ಬದಿಗಳನ್ನು ಗಾರ್ಬೇಜ್ ವಲ್ನರಬಲ್ ಪಾಯಿಂಟ್ಸ್ ಎಂದು ಗುರುತಿಸಲಾಗಿದೆ. ಇದರಲ್ಲಿ 118 ಜಾಗಗಳನ್ನು ಗಾರ್ಬೇಜ್ ಬ್ಲಾಕ್ ಸ್ಪಾಟ್​​ಗಳು ಎಂದು ಗುರುತು ಮಾಡಲಾಗಿದೆ. ಇದರಲ್ಲಿ 48 ಜಾಗಗಳು ವಾರಕ್ಕೆ ಎರಡು ಬಾರಿ ಬ್ಲಾಕ್ ಸ್ಪಾಟ್‌ಗಳಾಗುತ್ತವೆ. 70 ಜಾಗಗಳನ್ನು ತ್ಯಾಜ್ಯದಿಂದ ಗಬ್ಬೆದ್ದು ನಾರುತ್ತಿರುವ ಸ್ಪಾಟ್​ಗಳೆಂದು ಗುರುತಿಸಲಾಗಿದೆ. 1,400ಕ್ಕೂ ಅಧಿಕ ಜಾಗಗಳಲ್ಲಿ ಮನೆ, ಇತರ ತ್ಯಾಜ್ಯ ತಂದು ಎಸೆದು ಜನರು ಮಾಲಿನ್ಯ ಮಾಡುತ್ತಿದ್ದಾರೆ ಎಂದು ಪಾಲಿಕೆ ತಿಳಿಸಿದೆ.

(ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ತೆರೆ: ಲೋಪ ತಿದ್ದುಪಡಿ ಮಾಡಲು ಸರ್ಕಾರ ಆದೇಶ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.