ETV Bharat / city

ಅಲ್ಪಸಂಖ್ಯಾತರೇ, ಕಾಂಗ್ರೆಸ್‌ನ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ.. ಕಾಂಗ್ರೆಸ್​ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

author img

By

Published : Nov 17, 2021, 3:07 PM IST

ಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಡಿಕೆ ಡಿಕೆ ಎನ್ನುತ್ತಿದ್ದಾರೆ. ಮಾನ್ಯ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ "ಡಿಕೆ ಡಿಕೆ" ಎಂಬ ಘೋಷಣೆ ಸದ್ದು ಮಾಡುತ್ತಿದೆ. "ಹೌದು ಹುಲಿಯಾ" ಎಂದು ಬೊಬ್ಬೆ ಹಾಕುವುದಕ್ಕೆ ನೀವೂ ಒಂದು ತಂಡ ತಯಾರು ಮಾಡಿ..

ಕಾಂಗ್ರೆಸ್​ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ
ಕಾಂಗ್ರೆಸ್​ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

ಬೆಂಗಳೂರು : ಮುಸ್ಲಿಮರು ಒಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ, ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ, ವಿ ಎಸ್‌ ಉಗ್ರಪ್ಪ ಅವರಿಗೆ ಬರೀ ನೋಟಿಸ್‌ ನೀಡಲಾಗಿದೆ.

ಅಲ್ಪಸಂಖ್ಯಾತರೇ, ಕಾಂಗ್ರೆಸ್​ ಪಕ್ಷದ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ ಎಂದು ಕಾಂಗ್ರೆಸ್​ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ (BJP tweet against Congress) ದಾಳಿ ಮಾಡಿದೆ.

ನಿಮ್ಮ ಹತಾಶೆ ನಮಗೆ ಅರ್ಥವಾಗುತ್ತದೆ. ನೀವೆಂದಿಗೂ ಮುಸ್ಲಿಂ ಸಮುದಾಯದ ವಿಶ್ವಾಸಕ್ಕೆ ಅರ್ಹರಲ್ಲ ಎಂದು ಕೈ ನಾಯಕರ ವಿರುದ್ಧ ಬಿಜೆಪಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್ ಮಾಡಿದೆ.

  • ಕಾಂಗ್ರೆಸ್ಸಿಗರೇ,

    ಈ ಚಿತ್ರಗಳು ತೀರಾ ಹಳೆಯದೇನಲ್ಲ, ಕೇವಲ ಎರಡು ದಿನಗಳ ಹಿಂದೆಯಷ್ಟೇ ಪ್ರಧಾನಿ ಮೋದಿಯನ್ನು ಭೋಪಾಲ್‌ನಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ ಸಂದರ್ಭದ ಚಿತ್ರಗಳಿವು.

    ನಿಮ್ಮ ಹತಾಶೆ ನಮಗೆ ಅರ್ಥವಾಗುತ್ತದೆ, ನೀವೆಂದಿಗೂ ಮುಸ್ಲಿಂ ಸಮುದಾಯದ ವಿಶ್ವಾಸಕ್ಕೆ ಅರ್ಹರಲ್ಲ. pic.twitter.com/PUQuhRR4bw

    — BJP Karnataka (@BJP4Karnataka) November 17, 2021 " class="align-text-top noRightClick twitterSection" data=" ">

ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣ : ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ (Siddaramaiah) ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಹೊರ ನಡೆದಿದ್ದಾರೆ. ಇದಕ್ಕೆ ಕಾರಣ "ಡಿಕೆ ಡಿಕೆ" ಎಂಬ ಘೋಷಣೆ. ಅಲ್ಲಿಗೆ ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್‌ನಲ್ಲಿ ಇದು ಸಾಮಾನ್ಯವಲ್ಲವೇ? ಎಂದು ಟ್ವೀಟ್​ ಮಾಡುವ ಮೂಲಕ ವ್ಯಂಗ್ಯವಾಡಿದೆ.

#ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ?: ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ (KPCC President DK Shivakumar) ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ #ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ? ಎಂದು ಟೀಕಿಸಿದೆ.

  • ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು ಎಂದು @DKShivakumar ಅವರು @siddaramaiah ಅವರನ್ನು ಗುರಿಯಾಗಿಸಿ ಸೂಚನೆ ನೀಡಿದ್ದಾರೆ.

    ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ #ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ?#SidduVsDks

    — BJP Karnataka (@BJP4Karnataka) November 17, 2021 " class="align-text-top noRightClick twitterSection" data=" ">

ಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಡಿಕೆ ಡಿಕೆ ಎನ್ನುತ್ತಿದ್ದಾರೆ : ಸಿದ್ದರಾಮಯ್ಯನವರೇ, ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರೇರಕರಾದಿರಿ, ಟಿಪ್ಪು ಜಯಂತಿ (Tippu Jayanti) ನಡೆಸಿದಿರಿ, ಶಾದಿ ಭಾಗ್ಯ ಕೊಟ್ಟಿರಿ. ಆದರೆ, ಫಲವೇನು? ಅಲ್ಪಸಂಖ್ಯಾತರ ಸಮಾವೇಶದಲ್ಲಿ ನಿಮ್ಮ ಜೊತೆ ಅಲ್ಪಸಂಖ್ಯಾತ ಸಮುದಾಯದವರೇ ಇರಲಿಲ್ಲ.

ಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಡಿಕೆ ಡಿಕೆ ಎನ್ನುತ್ತಿದ್ದಾರೆ. ಮಾನ್ಯ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ "ಡಿಕೆ ಡಿಕೆ" ಎಂಬ ಘೋಷಣೆ ಸದ್ದು ಮಾಡುತ್ತಿದೆ. "ಹೌದು ಹುಲಿಯಾ" ಎಂದು ಬೊಬ್ಬೆ ಹಾಕುವುದಕ್ಕೆ ನೀವೂ ಒಂದು ತಂಡ ತಯಾರು ಮಾಡಿ ಎಂದು ಟ್ವೀಟ್​ ಮಾಡಿದೆ.

ಓದಿ: ಒಂದು ಕೆನ್ನೆಗೆ ಹೊಡೆದರೆ..: ಮತ್ತೆ ವಿವಾದದಲ್ಲಿ ಕಂಗನಾ ರಣಾವತ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.