ETV Bharat / city

ಕೇಂದ್ರದಿಂದ ರಾಜ್ಯಕ್ಕೆ ₹ 8,633 ಕೋಟಿ GST ಪರಿಹಾರ ಮಂಜೂರು

author img

By

Published : Jun 1, 2022, 6:34 AM IST

ಕೇಂದ್ರ ರಾಜ್ಯಗಳಿಗೆ ನೀಡಬೇಕಾದ 86,912 ಕೋಟಿ ರೂ. ಜಿಎಸ್​​ಟಿ ಪರಿಹಾರ ನೀಡಿದೆ. ಈ ಪೈಕಿ 8,633 ಕೋಟಿ ರೂ. ಪರಿಹಾರವನ್ನು ರಾಜ್ಯಕ್ಕೆ ಮಂಜೂರು ಮಾಡಿದೆ.

Finance Minister Nirmala Sitharaman
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ 2022ರ ಮೇ 31ರ ವರೆಗಿನ 8,633 ಕೋಟಿ ರೂ ಜಿಎಸ್​​ಟಿ ಪರಿಹಾರ ಮಂಜೂರು ಮಾಡಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕೇಂದ್ರ ರಾಜ್ಯಗಳಿಗೆ ನೀಡಬೇಕಾದ 86,912 ಕೋಟಿ ರೂ. ಜಿಎಸ್​​ಟಿ ಪರಿಹಾರ ನೀಡಿದೆ. ಈ ಪೈಕಿ 8,633 ಕೋಟಿ ರೂ.ಪರಿಹಾರ ರಾಜ್ಯಕ್ಕೆ ಮಂಜೂರು ಮಾಡಿದೆ. ಈ ಜೂನ್​​ವರೆಗೆ ಜಿಎಸ್​​ಟಿ ಪರಿಹಾರ ನೀಡಲಾಗುತ್ತದೆ.‌ ಬಳಿಕ ಪರಿಹಾರ ಸ್ಥಗಿತಗೊಳ್ಳಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆ ಚುನಾವಣಾ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ರಾಜ್ಯಕ್ಕೆ ಜಿಎಸ್​​ಟಿ ಪರಿಹಾರ ಹಣ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಬಾಕಿಯಿರುವ 12,909 ಕೋಟಿ ರೂ. ಜಿಎಸ್​ಟಿ ಪರಿಹಾರ ಹಣ ಕೇಂದ್ರ ಪಾವತಿಸಲಿದೆ: ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.