ETV Bharat / city

ಪಂಚಮಸಾಲಿ ಮೀಸಲಾತಿ ಹೋರಾಟದ ಬಗ್ಗೆ ಸಂಧಾನದ ಪ್ರಶ್ನೆ ಇಲ್ಲ.. ವರದಿ ಪಡೆದ ಬಳಿಕ ಪ್ರಕ್ರಿಯೆ ಆರಂಭ : ಸಿಎಂ

author img

By

Published : Oct 1, 2021, 5:32 PM IST

CM Basavaraj bommai
ಬಸವರಾಜ ಬೊಮ್ಮಾಯಿ

ದೆಹಲಿಯಿಂದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾನುವಾರ ನಗರಕ್ಕೆ ಆಗಮಿಸಲಿದ್ದಾರೆ. ಅವರು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಭ್ಯರ್ಥಿ ಆಯ್ಕೆ, ಉಪಚುನಾವಣೆ ಬಗ್ಗೆ ಚರ್ಚೆ ಮಾಡ್ತೇವೆ..

ಬೆಂಗಳೂರು : ಪಂಚಮಸಾಲಿ ಲಿಂಗಾಯಿತ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯ ಹೆಚ್ಚಾಗುತ್ತಿದೆ. ಈ ಬಗ್ಗೆ ಸಂಧಾನದ ಪ್ರಶ್ನೆಯೇ ಬರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳ ಜೊತೆ ಬೆಳಗ್ಗೆ ಚರ್ಚೆ ಮಾಡಿದ್ದೇವೆ. ಮೀಸಲಾತಿ ಕೊಡುವ ವಿಚಾರದಲ್ಲಿ ಸಂಧಾನದ ಪ್ರಶ್ನೆ ಬರುವುದಿಲ್ಲ. ಹಿಂದುಳಿದ ವರ್ಗಗಳ ಆಯೋಗಕ್ಕೆ ವರದಿ ನೀಡಲು ಶಿಫಾರಸು ಮಾಡಿದ್ದೇವೆ. ಅದರ ಬಗ್ಗೆ ಸ್ವಾಮೀಜಿಗಳಿಗೆ ವಿವರಣೆ ನೀಡಲಾಗಿದೆ.

ಆದಷ್ಟು ಬೇಗ ನ್ಯಾಯ ಕೊಡುವಂತೆ ಕೇಳಿದ್ದಾರೆ. ಹಾಗಾಗಿ, ಹಿಂದುಳಿದ ವರ್ಗದಿಂದ ವರದಿ ಬಂದ ಬಳಿಕ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು. ಸಂವಿಧಾನದ ತಿದ್ದುಪಡಿಯಾಗಿದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವ ನಿರ್ಧಾರ ರಾಜ್ಯಗಳಿಗೆ ಕೊಡಲಾಗಿದೆ.

ಮೀಸಲಾತಿಗಳ ಬಗ್ಗೆ ಸರ್ಕಾರ ಶುರು ಮಾಡಿರುವ ಪ್ರಕ್ರಿಯೆಗಳನ್ನು ಸ್ವಾಮೀಜಿ ಬಳಿ ತಿಳಿಸಿದ್ದೇವೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬರಲಿ. ಮೀಸಲಾತಿ ಬಗ್ಗೆ ಆದಷ್ಟು ಬೇಗ ಸರ್ಕಾರ ಪ್ರಕ್ರಿಯೆ ಆರಂಭಿಸುತ್ತದೆ ಎಂದರು.

ಉಪಸಮರ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ : ಎರಡು ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು‌ ಮಾತನಾಡಿದ್ದು (ಭಾನುವಾರ) ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ದೆಹಲಿಯಿಂದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾನುವಾರ ನಗರಕ್ಕೆ ಆಗಮಿಸಲಿದ್ದಾರೆ. ಅವರು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಭ್ಯರ್ಥಿ ಆಯ್ಕೆ, ಉಪಚುನಾವಣೆ ಬಗ್ಗೆ ಚರ್ಚೆ ಮಾಡ್ತೇವೆ ಎಂದರು.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸಂಧಾನ ಸಫಲ : ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ತಾತ್ಕಾಲಿಕ ವಿರಾಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.