ETV Bharat / city

ಕೋವಿಡ್​ ಹೆಚ್ಚಳ: ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ: ಜಾರಿಯಾಗುತ್ತಾ ಸೆಮಿ ಲಾಕ್​ಡೌನ್?

author img

By

Published : Jan 4, 2022, 12:06 PM IST

Updated : Jan 4, 2022, 12:25 PM IST

ಕೋವಿಡ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೋವಿಡ್​ ನಿಯಂತ್ರಣಕ್ಕೆ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.

cm basavaraja bommai meeting at evening
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಲಬುರಗಿ/ಬೆಂಗಳೂರು: ಕೋವಿಡ್​ ಪ್ರಕರಣಗಳು ಹೆಚ್ಚುತ್ತಿವೆ. ಇಂದು ಸಂಜೆ ಕೋವಿಡ್ ಬಗ್ಗೆ ಟಾಸ್ಕ್​ಫೋರ್ಸ್​​ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಲಾಕ್‌ಡೌನ್ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಸಭೆಗೆ ಆಹ್ವಾನ ನೀಡಲಾಗಿದೆ ಎಂದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿರುವುದು...

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಹೆಚ್ಚಾಗಿದೆ. ಪಕ್ಕದ ರಾಜ್ಯದಲ್ಲಿ ಹೆಚ್ಚಾದಾಗ ಸಹಜವಾಗಿಯೇ ನಮ್ಮ ರಾಜ್ಯದಲ್ಲಿ ಹೆಚ್ಚಾಗುತ್ತದೆ. ಇದರ ಬಗ್ಗೆ ಕಟ್ಟೆಚ್ಚರ‌ ವಹಿಸಬೇಕಿದ್ದು, ಗಡಿ ಭಾಗಗಳಲ್ಲಿ ಬಿಗಿ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಇನ್ನಷ್ಟು ಕಟ್ಟೆಚ್ಚರ ವಹಿಸುವ ಅವಶ್ಯಕತೆ ಇದೆ. ಗಡಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಮತ್ತು ಒಮಿಕ್ರಾನ್ ಪ್ರಕಣಗಳು ಹೆಚ್ಚಾಗುತ್ತಿವೆ. ಬರುವ ದಿನದಲ್ಲಿ‌ ಸುದೀರ್ಘ ಕ್ರಮ ಕೈಗೊಳ್ಳಬೇಕು. ಔಷಧ ಸೇರಿದಂತೆ ಎಲ್ಲ ವ್ಯವಸ್ಥೆ ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.

ಶಾಲೆಗೆ ರಜೆ?
ಶಾಲೆಗೆ ರಜೆ ಕೊಡುವುದರ ಬಗ್ಗೆ ತಜ್ಞರು ಏನು ಹೇಳುತ್ತಾರೆ ಎಂಬುದನ್ನು ಕೇಳಿ ತೀರ್ಮಾನ ಮಾಡುತ್ತೇವೆ. ಅಗತ್ಯಕ್ಕೆ ತಕ್ಕಂತೆ ಸಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಲಾಕ್​​ಡೌನ್, ಸೆಮಿಲಾಕ್​​ಡೌನ್ ಬಗ್ಗೆ ಎಕ್ಸ್​​ಪರ್ಟ್​​ ಮೀಟಿಂಗ್ ನಂತರ ನಿರ್ಧಾರ ಕೈಗೊಳ್ಳಲಾಗುವುದು. ಜನರ ಸಹಕಾರ ಕೂಡ ಅಗತ್ಯವಿದೆ. ಜನರು ಸಹಕಾರ ನೀಡಿದ್ರೆ ಕೊವಿಡ್ ನಿಯಂತ್ರಣ ಮಾಡಬಹುದು ಎಂದರು.

ಇದನ್ನೂ ಓದಿ: omicron: ಕರ್ನಾಟಕ - ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್

ವೇದಿಕೆ ಮೇಲೆ ಡಿ.ಕೆ.ಸುರೇಶ್, ಅಶ್ವತ್ಥ ನಾರಾಯಣ ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಇದು ಕರ್ನಾಟಕದ ಸಂಸ್ಕೃತಿ ಅಲ್ಲ. ಮಾತಿನಿಂದ ನಮ್ಮ ವಿಚಾರ ಹೇಳಬಹುದು. ಆದರೆ ಈ ರೀತಿ ವರ್ತನೆ ಸರಿಯಲ್ಲ ಎಂದರು. ಇದೇ ವೇಳೆ, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವ ಚರ್ಚೆಯೂ ನಡೆದಿಲ್ಲ ಎಂದು ತಿಳಿದರು.

Last Updated :Jan 4, 2022, 12:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.