ETV Bharat / city

ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸಚಿವರಿಂದ ಸಹಕಾರದ ಭರವಸೆ : ಸಿಎಂ ಬಿಎಸ್​ವೈ

author img

By

Published : Jul 13, 2021, 12:47 PM IST

ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲ ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಇನ್ನೂ 25 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು..

Bangalore
ಸಿಎಂ ಬಿಎಸ್​ವೈ

ಬೆಂಗಳೂರು : ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಷ್ಠಾನ ಸಂಬಂಧ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದರು.

ರಾಜ್ಯದ ನೀರಾವರಿ ಯೋಜನೆಗಳ ಜಾರಿ ಸಂಬಂಧ ಸಹಕಾರ ನೀಡುವುದಾಗಿ ಕೇಂದ್ರ ಸಚಿವರ ಭರವಸೆ : ಸಿಎಂ ಬಿಎಸ್​ವೈ

ವಿಧಾನಸೌಧದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ, ಕೃಷ್ಣಾ ಯೋಜನೆಗೆ ನೋಟಿಫಿಕೇಶನ್ ಹೊರಡಿಸುವುದು, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವುದು, ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಅನುಮತಿ ನೀಡಿಕೆ, ಎತ್ತಿನ ಹೊಳೆ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

Bangalore
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಸಿಎಂ ಬಿಎಸ್​ವೈ ಸಭೆ

ಆದಷ್ಟು ಬೇಗ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಮೇಕೆದಾಟು ಯೋಜನೆ ಕಾಮಗಾರಿ ಅನುಷ್ಠಾನಗೊಳಿಸುತ್ತೇವೆ. ತಮಿಳುನಾಡಿನ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಎಲ್ಲಾ ನೀರಾವರಿ ಯೋಜನೆಗಳ ಕಾಮಗಾರಿ ಮುಗಿಸುತ್ತೇವೆ. ಕೇಂದ್ರ ಸಚಿವರು ನಮ್ಮ‌ ನೀರಾವರಿ ಯೋಜನೆಗಳಿಗೆ ಶೀಘ್ರ ಅನುಮತಿ ನೀಡುವ ಸಂಬಂಧ ಭರವಸೆ ನೀಡಿದ್ದಾರೆ.

ಇದೇ ವೇಳೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲ ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಇನ್ನೂ 25 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕರ್ನಾಟಕಕ್ಕೆ ನ್ಯಾಯ ಒದಗಿಸಲಾಗುವುದು

ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಮೇಕೆದಾಟು ಸೇರಿದಂತೆ ರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಕೇಂದ್ರ ಮಟ್ಟದಲ್ಲಿ ಸಭೆ ಕರೆಯಲಾಗುವುದು. ಕರ್ನಾಟಕಕ್ಕೆ ಈ ಸಂಬಂಧ ನ್ಯಾಯ ಒದಗಿಸಲಾಗುವುದು.

ಕರ್ನಾಟಕಕ್ಕೆ ನ್ಯಾಯ ಒದಗಿಸಲಾಗುವುದು : ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಮೇಕೆದಾಟು ಬಗ್ಗೆ ತಮಿಳುನಾಡು ಕ್ಯಾತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರದ ಪಾತ್ರ ಏನಿದೆಯೋ ಅದನ್ನ ಮಾಡುತ್ತದೆ. ಪಕ್ಷ ಬೇರೆ, ಸರ್ಕಾರ ಬೇರೆ. ಸರ್ಕಾರದ ರೋಲ್ ಏನಿರುತ್ತೋ ಅದನ್ನ ಮಾಡುತ್ತದೆ ಎಂದರು.

ತಮಿಳುನಾಡು ರಾಜ್ಯ ಸರ್ಕಾರ ನಿರ್ಣಯ ತೆಗೆದುಕೊಂಡಿರುವ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ನಿರ್ಣಯ ತೆಗೆದುಕೊಳ್ಳಲಿ. ಕೇಂದ್ರ ಸರ್ಕಾರ ಏನು ನಿರ್ಧಾರ ಮಾಡಬೇಕೋ ಮಾಡುತ್ತದೆ. ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.