ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪಾದಯಾತ್ರೆ ಅರ್ಧಕ್ಕೆ​ ಮೊಟಕು

author img

By

Published : Jan 13, 2022, 12:51 PM IST

Updated : Jan 13, 2022, 3:31 PM IST

congress-ends-mekedau-padayatre

ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದು, ಡಿಕೆಶಿ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿ, ಈ ಕುರಿತು ಮಾಹಿತಿ ನೀಡಿದ್ದಾರೆ.

ರಾಮನಗರ: ಮೇಕೆದಾಟು ಪಾದಯಾತ್ರೆಯಿಂದ ಕಾಂಗ್ರೆಸ್ ನಾಯಕರು ಹಿಂದೆ ಸರಿದಿದ್ದಾರೆ. ಕೇವಲ ಐದೇ ದಿನಕ್ಕೆ ಪಾದಯಾತ್ರೆ ಕೊನೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ರಾಮನಗರ ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ‌ ಮಹತ್ವ ಸಭೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆ ಸದ್ಯಕ್ಕೆ ಕೈ ಬಿಟ್ಟಿದ್ದೇವೆ ಅಷ್ಟೇ, ಮುಂದಿನ ದಿನಗಳಲ್ಲಿ‌ ಮೇಕೆದಾಟು ಪಾದಯಾತ್ರೆ ಮಾಡೇ ಮಾಡುತ್ತೇವೆ. ರಾಮನಗರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುತ್ತೇವೆ. ಸರ್ಕಾರದ ಬೆದರಿಕೆಯಿಂದ ಪಾದಯಾತ್ರೆ ವಾಪಸ್​ ಪಡೆಯುತ್ತಿಲ್ಲ. ನಮಗೆ ರಾಜ್ಯದ ಜನರ ಹಿತ ಕೂಡ ಮುಖ್ಯವಾಗಿದೆ. ಜನರ ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಹಿಂದಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪಾದಯಾತ್ರೆ ಅರ್ಧಕ್ಕೆ​ ಮೊಟಕು

ಕೊರೊನಾ ಹೆಚ್ಚಾಗಲು ಬಿಜೆಪಿ ಕಾರಣ: ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ತಗುಲಿದೆ. ಮೇಕೆದಾಟು ಯೋಜನೆಗೆ ಬಹಳ ಉತ್ಸಾಹದಿಂದ ಭಾಗವಹಿಸಿದ್ದೀರಿ. ಪಾದಯಾತ್ರೆಗೆ ಬಹಳ ಅಭೂತಪೂರ್ವ ಯಶಸ್ಸು ಬಂದಿದೆ.

ಕೊರೊನಾ ಹೆಚ್ಚಾಗಲು ಕಾಂಗ್ರೆಸ್ ಕಾರಣ ಅಲ್ಲ. ಕೊರೊನಾ 3ನೇ ಅಲೆ ಸ್ಫೋಟಕ್ಕೆ ಕಾಂಗ್ರೆಸ್ ಕಾರಣವಲ್ಲ. ಬಿಜೆಪಿಯೇ ಕೊರೊನಾ ಹೆಚ್ಚಾಗಲು ಕಾರಣ. ಕೊರೊನಾ 3ನೇ ಅಲೆ ಶುರುವಾದರೂ ಸಿಎಂ ಯಾವ ಸಭೆಯನ್ನೂ ನಿಲ್ಲಿಸಲಿಲ್ಲ. ನೂತನ ಎಂಎಲ್​ಸಿ ಪ್ರಮಾಣವಚನ ಸ್ವೀಕಾರ ಸಮಾರಂಭ ಮಾಡಿದರು. ಮೂರರಿಂದ ನಾಲ್ಕು ಸಾವಿರ ಜನ ಸೇರಿಸಿದ್ದರು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

congress-abruptly-ends-mekedau-padayatre
ಸಭೆಯಲ್ಲಿ ಡಿಕೆಶಿ

ಗೃಹ ಸಚಿವರ ಕ್ಷೇತ್ರದಲ್ಲೇ ಜಾತ್ರೆ ನಡೆಯಿತು. ರೇಣುಕಾಚಾರ್ಯ ಜಾತ್ರೆ ಮಾಡಿದ್ದರು. ಆದರೆ, ಅವರ ವಿರುದ್ಧ ಯಾವುದೇ ಕ್ರಮ ಇಲ್ಲ. ಯಾರ ಮೇಲೂ ಕೇಸ್ ಹಾಕಲಿಲ್ಲ. ಆದರೆ ಕಾಂಗ್ರೆಸ್ ಪಾದಯಾತ್ರೆ ತಡೆಯುವ ಉದ್ದೇಶ ಸರ್ಕಾರಕ್ಕೆ ಇತ್ತು ಎಂದು ಬಿಜೆಪಿ ವಿರುದ್ದ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ತಾತ್ಕಾಲಿಕ ತಡೆ ಅಷ್ಟೇ: ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜನರ ಹಿತದೃಷ್ಟಿಯಿಂದ ಪಾದಯಾತ್ರೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಮೊದಲು‌ ಜನರ ಆರೋಗ್ಯ ಮುಖ್ಯ. ಬಿಜೆಪಿಗೆ ಹೆದರಿ ಪಾದಯಾತ್ರೆ ಹಿಂದಕ್ಕೆ ತೆಗೆದುಕೊಂಡಿಲ್ಲ. ಕೊರೊನಾ ಸಂಖ್ಯೆ ಇಳಿಮುಖ ಆಗುತ್ತಿದ್ದಂತೆ ಇಲ್ಲಿಂದಲೇ ಪಾದಯಾತ್ರೆ ಆರಂಭವಾಗುತ್ತದೆ. ರಾಮನಗರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುವುದು. ಇದು ಅಂತ್ಯವಲ್ಲ, ಕೇವಲ ತಾತ್ಕಾಲಿಕ ತಡೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ನಿನ್ನೆಯಷ್ಟೇ ಹೈಕೋರ್ಟ್ ಕೋವಿಡ್ ಉಲ್ಬಗೊಳ್ಳುತ್ತಿರುವ ವೇಳೆ ಪಾದಯಾತ್ರೆಗೆ ಅವಕಾಶ ನೀಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಕೆಪಿಸಿಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನೋಟಿಸ್ ನೀಡಿತ್ತು.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಎಫೆಕ್ಟ್​: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿಗೆ ಕೋವಿಡ್

Last Updated :Jan 13, 2022, 3:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.