ETV Bharat / city

ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ, ನಾಳೆಯಿಂದ ಪ್ರತಿಭಟನೆಗೆ ಕಾಂಗ್ರೆಸ್‌ ನಿರ್ಧಾರ

author img

By

Published : Apr 13, 2022, 3:23 PM IST

Updated : Apr 13, 2022, 3:56 PM IST

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧಿಸಿದಂತೆ ಮತ್ತು ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್​ ಪಕ್ಷ ನಾಳೆಯಿಂದ ಐದು ದಿನ ಪ್ರತಿಭಟನೆ ಕೈಗೊಳ್ಳಲಿದೆ.

congress will protests in all over state: says dk shivakumar
ಡಿಕೆಶಿ, ಸಿದ್ದರಾಮಯ್ಯ, ಸುರ್ಜೇವಾಲಾ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧಿಸಿದಂತೆ ಮತ್ತು ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ನಾಳೆಯಿಂದ ಐದು ದಿನ ಹೋರಾಟ ಮಾಡುತ್ತೇವೆ. ಬೆಳಗ್ಗೆ 10.30ಕ್ಕೆ ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಕುಟುಂಬದವರನ್ನು ಇಂದು ಭೇಟಿ ಮಾಡಿ ಧೈರ್ಯ ತುಂಬಲಿದ್ದೇವೆ ಎಂದರು.

ಸಂತೋಷ್​ ಅವರ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಯಾಕೆ ವಿಳಂಬ ಅನ್ನೋದು ಗೊತ್ತಾಗುತ್ತಿಲ್ಲ. ಈ ಪ್ರಕರಣ ದೇಶದಲ್ಲೇ ದೊಡ್ಡ ದುರಂತ. ಅವರು ರಾಜೀನಾಮೆ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಆದ್ರೆ ಮೊದಲು ಅವರನ್ನು ಅರೆಸ್ಟ್ ಮಾಡಬೇಕು. ಸರ್ಕಾರ, ಪೊಲೀಸರು ಅವರ ರಕ್ಷಣೆಗೆ ಹೊರಟಿದ್ದಾರೆ ಎಂದು ಅವರು ದೂರಿದರು.


ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಸಚಿವ ಈಶ್ವರಪ್ಪನವರ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿ ಸಂತೋಷ್ ಪಾಟೀಲ್ ಕುಟುಂಬದವರು ದೂರು ಕೊಟ್ಟಿದ್ದಾರೆ. ಆದರೆ ಪೊಲೀಸರು ಭ್ರಷ್ಟಾಚಾರ ಅಡಿಯಲ್ಲಿ ಈಶ್ವರಪ್ಪರ ಮೇಲೆ ಕೇಸ್ ಹಾಕಿಲ್ಲ. ಇಡೀ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪವಿದೆ. ರಾಜ್ಯ ಗುತ್ತಿಗೆದಾರರ ಸಂಘವೇ ಈ ಆರೋಪ ಮಾಡಿದೆ. ಇಡೀ ದೇಶದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ಸರ್ಕಾರ ಎಂದು ಆರೋಪಿಸಿದರು.

ಇದನ್ನೂ ಓದಿ: ರಾಜೀನಾಮೆಗೆ ಒತ್ತಾಯಿಸೋದು ಸ್ವಾಭಾವಿಕ, ನಾವು ವಿಪಕ್ಷದಲ್ಲಿದ್ದರೂ ಅದನ್ನೇ ಮಾಡುತ್ತಿದ್ದೆವು: ಸಿ.ಟಿ. ರವಿ

Last Updated : Apr 13, 2022, 3:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.