ETV Bharat / city

ಹೆಚ್​ಡಿಕೆ ಗಂಡಸ್ತನದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ: ಡಿ.ಕೆ. ಶಿವಕುಮಾರ್

author img

By

Published : Mar 31, 2022, 5:24 PM IST

ಹಲಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಸಚಿವ ಅಶ್ವತ್ಥ್​ ನಾರಾಯಣ್ ಅವರು ಗಂಡಸ್ತನದ ಬಗ್ಗೆ ಮಾತನಾಡುತ್ತಾರೊ, ಬೇರೆಯವರು ಮಾತನಾಡುತ್ತಾರೋ ಆ ಬಗ್ಗೆ ಉತ್ತರ ನೀಡುವುದಿಲ್ಲ ಎಂದು ಹೇಳಿದ್ದಾರೆ.

dk-shivakumar-speaks-about-kumaraswamys-statement
ಅಶ್ವಥ್ ನಾರಾಯಣ್ ಅವರು ಗಂಡಸ್ತನದ ಬಗ್ಗೆ ಮಾತನಾಡುತ್ತಾರೊ, ಬೇರೆಯವರು ಮಾತನಾಡುತ್ತಾರೋ ಆ ಬಗ್ಗೆ ಉತ್ತರ ನೀಡುವುದಿಲ್ಲ: ಡಿ.ಕೆ.ಶಿವಕುಮಾರ್

ದೇವನಹಳ್ಳಿ: ಹಲಾಲ್ ವಿವಾದಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುತ್ತಿರುವ ಹಿಂದೂ ಸಂಘಟನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಡಸ್ತನ ಇದ್ದರೆ ಮೊದಲು ನಿಯಂತ್ರಿಸಲಿ ಎಂಬ ವಿವಾದಾತ್ಮಕ ಹೇಳಿಕೆಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಕುಮಾರಣ್ಣ ಬಹಳ ಹಿರಿಯರಿದ್ದಾರೆ. ಈ ಬಗ್ಗೆ ಉತ್ತರ ನೀಡುವುದಿಲ್ಲ ಎಂದು ಹೇಳಿದರು.

ಹಲಾಲ್ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಗಂಡಸ್ತನ ಇಲ್ಲ, ಕಾಂಗ್ರೆಸ್ ಗೆ ತಾಖತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಕೆಶಿ, 'ಕುಮಾರಣ್ಣ ಬಹಳ ಹಿರಿಯರಿದ್ದಾರೆ. ಸಚಿವ ಅಶ್ವಥ್ ನಾರಾಯಣ್ ಅವರು ಗಂಡಸ್ತನದ ಬಗ್ಗೆ ಮಾತನಾಡುತ್ತಾರೊ, ಬೇರೆಯವರು ಮಾತನಾಡುತ್ತಾರೋ ಆ ಬಗ್ಗೆ ಉತ್ತರ ನೀಡುವುದಿಲ್ಲ. ಸದ್ಯ ನಾವು ಪಕ್ಷದ ಸದಸ್ಯತ್ವ ನೋಂದಣಿ ಮಾಡಿಸುತ್ತಿದ್ದು, ಇಂದು ಕಡೆಯ ದಿನವಾಗಿದೆ. ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳುತ್ತಿದ್ದೇವೆ. ಇಂತಹ ವಿಚಾರಗಳಿಗೆ ಜನ ಉತ್ತರ ನೀಡುತ್ತಾರೆ' ಎಂದರು.

ರಾಹುಲ್ ಗಾಂಧಿಗೆ ಸ್ವಾಗತ ಕೋರಲು ಆಗಮಿಸಿದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರತಿಕ್ರಿಯೆ.

ನಾಳೆ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 115 ನೇ ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಆಗಮಿಸಿರುವ ಪಕ್ಷದ ನಾಯಕ ರಾಹುಲ್ ಗಾಂಧಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುತ್ತಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಗೆ ಸ್ವಾಗತ ಕೋರಲು ಆಗಮಿಸಿದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಹುಲ್ ಗಾಂಧಿ ಅವರು ನಮ್ಮ ರಾಜ್ಯಕ್ಕೆ ಆಗಮಿಸಿದ್ದು ಅಕ್ಷರ, ಅನ್ನ ದಾಸೋಹ ನೀಡಿರುವ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ನಮಿಸಲಿದ್ದಾರೆ. ಇಂದಿರಾ ಗಾಂಧಿ ಅವರಿಂದ ಹಿಡಿದು ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ನಮ್ಮ ರಾಜ್ಯದ ಎಲ್ಲ ಸಮುದಾಯಗಳ ಮಠಗಳ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಅವರೆಲ್ಲರೂ ಇಲ್ಲಿನ ಮಠಗಳಿಗೆ ಭೇಟಿ ನೀಡಿರುವ ಪರಂಪರೆ ಇದೆ. ಈಗ ಅದನ್ನು ರಾಹುಲ್ ಗಾಂಧಿ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30 ಕ್ಕೆ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದು, ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ ಯುವ, ವಿದ್ಯಾರ್ಥಿ ಹಾಗೂ ಮಹಿಳಾ ಘಟಕಗಳ ಜತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಓದಿ : ಪ್ರತಿ ಕಿ.ಮೀಗೆ ಕೇವಲ 2 ರೂ ಖರ್ಚು! ಹೈಡ್ರೋಜನ್​ ಕಾರು ಬಳಕೆಗೆ ನಾಂದಿ ಹಾಡಿದ ನಿತಿನ್ ಗಡ್ಕರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.