ETV Bharat / city

ಪರಿಷತ್ ಚುನಾವಣೆಗೆ ನಾಲ್ಕರ ಪೈಕಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ: ಡಿ ಕೆ ಶಿವಕುಮಾರ್

author img

By

Published : Feb 4, 2022, 7:25 PM IST

ಪದವೀಧರ ಕ್ಷೇತ್ರಕ್ಕೆ ಆರು ಮಂದಿ ಅರ್ಜಿ ಹಾಕಿದ್ದು, ಶಿಕ್ಷಕರ ಕ್ಷೇತ್ರಕ್ಕೆ 15ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯುವುದು ಮುಖ್ಯವಾಗಿದೆ. ಇಂದಿನ ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕೆಲವು ನಾಯಕರು ಗೋವಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದು, ಮುಂದಿನ ಕೆಲ ದಿನಗಳಲ್ಲಿ ಅವರು ಬಂದ ನಂತರ ಚರ್ಚಿಸಿ, ನಮ್ಮ ಶಿಫಾರಸು ದೆಹಲಿಗೆ ಕಳುಹಿಸಿಕೊಡುತ್ತೇವೆ..

ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಪರಿಷತ್ ಪದವೀಧರರು, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಮಧು ಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಬಾಗಲಕೋಟೆ, ಬಾದಾಮಿ, ಬಿಜಾಪುರದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದ ತಲಾ ಒಬ್ಬರು ಅಭ್ಯರ್ಥಿ ಆಯ್ಕೆ ಸಂಬಂಧ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಪದವೀಧರ ಕ್ಷೇತ್ರಕ್ಕೆ ಆರು ಮಂದಿ ಅರ್ಜಿ ಹಾಕಿದ್ದು, ಶಿಕ್ಷಕರ ಕ್ಷೇತ್ರಕ್ಕೆ 15ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯುವುದು ಮುಖ್ಯವಾಗಿದೆ. ಇಂದಿನ ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕೆಲವು ನಾಯಕರು ಗೋವಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದು, ಮುಂದಿನ ಕೆಲ ದಿನಗಳಲ್ಲಿ ಅವರು ಬಂದ ನಂತರ ಚರ್ಚಿಸಿ, ನಮ್ಮ ಶಿಫಾರಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ ಎಂದರು.

ಇದನ್ನೂ ಓದಿ: ಧರ್ಮದ ಹೆಸರಿನಲ್ಲಿ ಮನಸ್ಸಿಗೆ ನೋವು ಮಾಡಿಕೊಳ್ಳುವುದಕ್ಕಿಂತ.. ಹೀಗೆ ಮಾಡಿ ಅಂದರು ಡಿಕೆಶಿ..

ಹಿಜಬ್ ಹಾಗೂ ಕೇಸರಿ ವಸ್ತ್ರಧಾರಣೆ ವಿಚಾರವಾಗಿ ಎದ್ದಿರುವ ವಿವಾದ ಕುರಿತು ಪ್ರತಿಕ್ರಿಯಿಸಿದ ಅವರು, ‘ನಾನು ಈ ವಿಚಾರವಾಗಿ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಬೇಕಾಗಿದೆ. ಮೊದಲಿನಿಂದ ಆಚರಿಸಿಕೊಂಡು ಬಂದ ಪದ್ಧತಿ, ಸಂಸ್ಕೃತಿ, ಇತಿಹಾಸ, ಕಾನೂನು ಎಲ್ಲವನ್ನೂ ಚರ್ಚಿಸಬೇಕಾಗಿದೆ. ನಾನು ಈ ವಿಚಾರವನ್ನು ಗಮನಿಸುತ್ತಿದ್ದೇನೆ. ನ್ಯಾಯಾಲಯ ಈಗಾಗಲೇ ಮಧ್ಯ ಪ್ರವೇಶಿಸಿರುವ ಹಿನ್ನೆಲೆ ನಾನು ಪಕ್ಷದ ಅಧ್ಯಕ್ಷನಾಗಿ ಮಾತನಾಡುವುದು ಸರಿಯಾಗುವುದಿಲ್ಲ. ಎಲ್ಲರಿಗೂ ಅವರದೇ ಆದ ಜೀವನ ಪದ್ಧತಿ, ಸಂಸ್ಕೃತಿ ಇರುವುದನ್ನು ಚರ್ಚಿಸಬೇಕಿದೆ. ಇದು ಬಹಿರಂಗ ಚರ್ಚೆ ಮಾಡುವ ವಿಚಾರವಲ್ಲ. ಮಕ್ಕಳು, ಧಾರ್ಮಿಕ ಆಚರಣೆಯಂತಹ ಸೂಕ್ಷ್ಮ ವಿಚಾರವಿರುವುದರಿಂದ ಈ ಬಗ್ಗೆ ಒಂದು ಚೌಕಟ್ಟಿನಲ್ಲಿ ಚರ್ಚೆ ಮಾಡಬೇಕಿದೆ ಎಂದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.