ETV Bharat / city

ಜೆಡಿಎಸ್ ಅಧಿಕಾರಕ್ಕೆ ಬಂದರೆ ನೀಟ್ ಪರೀಕ್ಷೆ ವಿರುದ್ಧ ನಿರ್ಣಯ ಕೈಗೊಳ್ಳುತ್ತೇವೆ: ಹೆಚ್‌ಡಿಕೆ ಘೋಷಣೆ

author img

By

Published : Mar 3, 2022, 1:58 PM IST

ವೈದ್ಯಕೀಯ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗುವ ಸಂಬಂಧ ಇದೀಗ ರಾಜ್ಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಗೆದ್ದರಿಗೆ ನೀಟ್ ಪರೀಕ್ಷೆ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ಮಾಜಿ ಸಿಎಂ ಹೆಚ್‌ಡಿಕೆ ಘೋಷಿಸಿದ್ದಾರೆ.

ex cm hd kumaraswamy reaction on neet exam
2023ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ಪರೀಕ್ಷೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ: ಹೆಚ್‌ಡಿಕೆ

ಬೆಂಗಳೂರು: 2023ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ನೀಟ್ ಪರೀಕ್ಷೆ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹೆಚ್‌ಡಿಕೆ, ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣೆಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ. ನೀಟ್ ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು ಎಂದಿದ್ದಾರೆ.

  • 2023ರಲ್ಲಿ ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ. 1/7

    — H D Kumaraswamy (@hd_kumaraswamy) March 3, 2022 " class="align-text-top noRightClick twitterSection" data=" ">

ನಾನು ಮೆಡಿಕಲ್ ಕಾಲೇಜು ನಡೆಸುತ್ತಿಲ್ಲ. ಎಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ. ಆದರೂ, ಉನ್ನತ ಶಿಕ್ಷಣ ಸಚಿವ ಮಾನ್ಯ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು ನಾಲಿಗೆ ಜಾರಿ, ತಮ್ಮ ಉನ್ನತ ಗುಣವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

  • ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ? 6/7

    — H D Kumaraswamy (@hd_kumaraswamy) March 3, 2022 " class="align-text-top noRightClick twitterSection" data=" ">

ಕೇಂದ್ರದ ಒಬ್ಬ ಸಚಿವರು, ನೀಟ್ ಪರೀಕ್ಷೆ ಪಾಸ್ ಮಾಡಲಾಗದ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗುತ್ತಾರೆ ಎಂದು ಮಕ್ಕಳ ಸ್ವಾಭಿಮಾನವನ್ನು ಅಪಮಾನಿಸಿದ್ದರೆ, ಉನ್ನತ ಶಿಕ್ಷಣ ಸಚಿವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದ್ರೋಹದ ಹಣೆಪಟ್ಟಿ ಕಟ್ಟಿ ದೊಡ್ಡತನ ಮೆರೆದಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

  • ಇದೆಲ್ಲವೂ ಸರಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ. 7/7#ನೀಟ್_ನಿಲ್ಲಲಿ #stopneet #SaveKAStudents

    — H D Kumaraswamy (@hd_kumaraswamy) March 3, 2022 " class="align-text-top noRightClick twitterSection" data=" ">

ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಆತ್ಮರೋಧನೆ ಕೇಳುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಇದೆಲ್ಲವೂ ಸರ್ಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ. ನೀಟ್ ನಿಲ್ಲಲಿ ಎಂದು ಹೆಚ್‌ಡಿಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: 2 ಬಾರಿ ನೀಟ್‌ ಪರೀಕ್ಷೆಯಲ್ಲಿ ಸಾಧನೆ​, ವೈದ್ಯಕೀಯ ವ್ಯಾಸಂಗಕ್ಕೆ ಬಡತನ ಅಡ್ಡಿ; ಸರ್ಕಾರದ ನೆರವಿಗೆ ಯುವತಿ ಮನವಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.