ETV Bharat / city

ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ 28ನೇ ಪುಣ್ಯಸ್ಮರಣೆ ಕಾರ್ಯಕ್ರಮ

author img

By

Published : Aug 22, 2021, 8:19 PM IST

ex cm r gundurao 28th death anniversary
ಆಹಾರ ಕಿಟ್ ವಿತರಣಾ ಕಾರ್ಯಕ್ರಮ

ಶಿಕ್ಷಕರ ಮಗನಾಗಿ ಹುಟ್ಟಿದ ಆರ್ ಗುಂಡೂರಾವ್ ಅವರು ಬಡವರ ಬಗ್ಗೆ ಅಪಾರ ಕಾಳಜಿವುಳ್ಳ ವ್ಯಕ್ತಿತ್ವ ಬೆಳೆಸಿಕೊಂಡಿದ್ದರು. ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಮಾಡಿದರು. ಆರ್.ಗುಂಡೂರಾವ್ ರವರು ನನ್ನ ರಾಜಕೀಯ ಮತ್ತು ಸಮಾಜ ಸೇವೆ ಮಾಡಲು ಪ್ರೇರಣೆ..

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರ 28ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಪ್ರಯುಕ್ತ ಮತ್ತು ಕೋವಿಡ್​ನಿಂದ ಮೃತಪಟ್ಟ ಕುಟುಂಬಗಳಿಗೆ ಹತ್ತು ಸಾವಿರ ಸಹಾಯಧನ ಮತ್ತು ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ಗಾಂಧಿನಗರ ವಿಧಾನಸಭಾ ಕ್ಷೇತ್ರ, ಬಿನ್ನಿಪೇಟೆಯ ಕೆಪಿಟಿಸಿಎಲ್ ಆಟದ ಮೈದಾನದಲ್ಲಿ ಶ್ರೀ ಆರ್ ಗುಂಡೂರಾವ್ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಆನನ್ಯಾ ರಾವ್ ಮತ್ತಿತರರು ಪಾಲ್ಗೊಂಡಿದ್ದರು. ಆರ್ ಗುಂಡೂರಾವ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ರಾಮಲಿಂಗಾರೆಡ್ಡಿ, ಅತಿ ಕಿರಿಯ ವಯಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದವರು ಆರ್.ಗುಂಡೂರಾವ್. ಮುಖ್ಯಮಂತ್ರಿಯಾಗಿ ಮೂರು ವರ್ಷ ಆಡಳಿತದಲ್ಲಿ ಸ್ವಜನ ಪಕ್ಷಪಾತವಿಲ್ಲದೇ, ಜಾತ್ಯಾತೀತ ತತ್ವದ ಮೇಲೆ ಆಡಳಿತ ನಡೆಸಿದರು. ಆಡಳಿತದಲ್ಲಿ ಬೇಕಾಬಿಟ್ಟಿ ವರ್ಗಾವಣೆಗೆ ಕಡಿವಾಣ ಹಾಕಿದರು. ಆರ್ ಗುಂಡೂರಾವ್ ಫೌಂಡೇಷನ್ ಸಹ ಸಮಾಜಿಮುಖಿ ಕಾರ್ಯಗಳನ್ನು ಮಾಡುತ್ತಾ ಮೆಚ್ಚುಗೆ ಗಳಿಸಿದೆ ಎಂದ್ರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಆಡಳಿತದಲ್ಲಿ 165 ಭರವಸೆಗಳನ್ನ ಪೂರೈಸಿದ ಭಾರತದ ಮೊಟ್ಟಮೊದಲ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾಂಗ್ರೆಸ್ ಪಕ್ಷವು ಎಲ್ಲ ಧರ್ಮ ಮತ್ತು ಜಾತಿಯವರನ್ನ ಸರಿಸಮಾನವಾಗಿ ಕಾಣುವ ಪಕ್ಷವಾಗಿದೆ ಎಂದು ಹೇಳಿದರು.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಶಿಕ್ಷಕರ ಮಗನಾಗಿ ಹುಟ್ಟಿದ ಆರ್ ಗುಂಡೂರಾವ್ ಅವರು ಬಡವರ ಬಗ್ಗೆ ಅಪಾರ ಕಾಳಜಿವುಳ್ಳ ವ್ಯಕ್ತಿತ್ವ ಬೆಳೆಸಿಕೊಂಡಿದ್ದರು. ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಮಾಡಿದರು. ಆರ್.ಗುಂಡೂರಾವ್ ರವರು ನನ್ನ ರಾಜಕೀಯ ಮತ್ತು ಸಮಾಜ ಸೇವೆ ಮಾಡಲು ಪ್ರೇರಣೆಯಾಗಿದ್ದಾರೆ ಎಂದ್ರು.

ಬಡವರಿಗೆ ಉಚಿತ ಮನೆ ನಿರ್ಮಾಣ ಮತ್ತು ರೈತರಿಗೆ ಉಚಿತ ವಿದ್ಯುತ್ ಸೇರಿ ಹಲವಾರು ಜನಪರ ಕಾರ್ಯಗಳನ್ನ ಕೈಗೊಂಡರು. ಇದೀಗ ಆರ್.ಗುಂಡೂರಾವ್ ಫೌಂಡೇಷನ್ ವತಿಯಿಂದ ಕೋವಿಡ್-19 ರೋಗದಿಂದ ಸಂಕಷ್ಟದಲ್ಲಿ ಇರುವವರಿಗೆ ಆಹಾರ ಕಿಟ್, ಔಷಧಿ ವಿತರಣೆ ಮತ್ತು ಸೋಂಕಿತರಿಗೆ ಆಸ್ಪತ್ರೆಯಲ್ಲಿ ಬೆಡ್ ಸೌಲಭ್ಯ ಸೇರಿ ಹಲವಾರು ಸಮಾಜ ಸೇವಾ ಕಾರ್ಯಗಳು ಆರ್ ಗುಂಡೂರಾವ್ ಫೌಂಡೇಷನ್ ಮೂಲಕ ನಡೆಯುತ್ತಿವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.