ETV Bharat / city

ಯೋಜನೆಗಳಿಗೆ ಕೊನೆಯ ಕಂತಿನ ಬಾಕಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಸೂಚನೆ

author img

By

Published : Nov 26, 2020, 10:50 PM IST

10 ಕೋಟಿ ರೂಪಾಯಿವರೆಗಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆಯುವ ಅಗತ್ಯವಿಲ್ಲ ಎಂದು ಆರ್ಥಿಕ ಇಲಾಖೆ ತಿಳಿಸಿದೆ.

karnataka government
ಕರ್ನಾಟಕ ಸರ್ಕಾರ

ಬೆಂಗಳೂರು: 2020-21ನೇ ಸಾಲಿನ ಯೋಜನೆಗಳಿಗೆ ಡಿಸೆಂಬರ್​​ನಿಂದ ಮಾರ್ಚ್​ವರೆಗಿನ ಕೊನೆಯ ಕಂತಿನ ಬಾಕಿ ಅನುದಾನ ಬಿಡುಗಡೆ ಮಾಡಲು ವಿವಿಧ ಇಲಾಖೆಗಳಿಗೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ.

ವಿವಿಧ ಇಲಾಖೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ 10 ಕೋಟಿ ರೂಪಾಯಿವರೆಗಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆಯುವ ಅಗತ್ಯವಿಲ್ಲ ಎಂದು ಆರ್ಥಿಕ ಇಲಾಖೆ ತಿಳಿಸಿದೆ.

ಆದರೆ, ಹಣ ಖರ್ಚು ಮಾಡಿರುವ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಈ ಕುರಿತು ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್​​ ಕೌರ್ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಟಿಪ್ಪಣಿ ಬರೆದಿದ್ದಾರೆ.

ಈ ಮೂಲಕ ಯಾವುದೇ ಇಲಾಖೆ 2020-21ನೇ ಸಾಲಿನಲ್ಲಿ ನವೆಂಬರ್​ನಿಂದ ಫೆಬ್ರವರಿವರೆಗೂ ವೇತನ, ಭತ್ಯೆ, ಪಿಂಚಣಿ ಸೇರಿದಂತೆ ಅನುದಾನ ಬಿಡುಗಡೆ ಮಾಡಲು ಇಲಾಖಾ ಮುಖ್ಯಸ್ಥರಿಗೆ ಅಧಿಕಾರ ನೀಡಿ ಆದೇಶಿಸಿದ್ದಾರೆ.

ರಾಜಧಾನಿ ಪ್ರವಾಸಿ ತಾಣಗಳು ಅನ್​ಲಾಕ್​ ಆದ್ರೂ ಲಾಕ್ ಆಗಿರುವ ಪ್ರವಾಸಿಗರ ಮೈಂಡ್ ಸೆಟ್!

ಕೊರೊನಾ ಪರಿಣಾಮದಿಂದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಬಿಡುಗಡೆಯ ಕುರಿತು ಇಲಾಖೆಗಳಿಗೆ ನೀಡಿರುವ ಸೂಚನೆ ಮುಂದುವರೆಯಲಿದ್ದು, 10 ಕೋಟಿವರೆಗಿನ ಚಾಲ್ತಿಯಲ್ಲಿರುವ ಹಾಗೂ ಈಗಾಗಲೇ ಚಾಲನೆಯಲ್ಲಿರುವ ಯೋಜನೆಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಬೇಕು. ಯಾವುದೇ ಹೊಸ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತಿಲ್ಲ. ಹಾಗೆ ಮಾಡಬೇಕೆಂದರೆ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆಯುವುದು ಕಡ್ಡಾಯ ಎಂದು ಸೂಚಿಸಲಾಗಿದೆ.

ಯಾವುದೇ ಇಲಾಖೆ 10 ಕೋಟಿಗಿಂತ ಹೆಚ್ಚಿನ ಮೊತ್ತದ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ಮೊದಲು ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಅಲ್ಲದೇ ಈಗಾಗಲೇ ಏಪ್ರಿಲ್‍ನಿಂದ ಅಕ್ಟೋಬರ್​ವರೆಗೆ ಬಿಡುಗಡೆ ಮಾಡಿರುವ ಹಣದಲ್ಲಿ ಶೇ. 75ರಷ್ಟು ಖರ್ಚು ಮಾಡಿರುವುದನ್ನು ಖಾತ್ರಿ ಮಾಡಿಕೊಂಡು ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು ಎಂದು ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.