ETV Bharat / city

ಬನ್ನೇರುಘಟ್ಟ ಜೈವಿಕ ಉದ್ಯಾನವನದ 'ಯದುನಂದನ್' ಸಾವು

author img

By

Published : Sep 19, 2021, 10:27 PM IST

Giraffe dies
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿದ್ದ ಮೂರುವರೆ ವರ್ಷದ ಗಂಡು ಜಿರಾಫೆ ಸಾವನ್ನಪ್ಪಿದೆ.

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿದ್ದ ಮೂರುವರೆ ವರ್ಷದ ಗಂಡು ಜಿರಾಫೆ 'ಯದುನಂದನ್' ಭಾನುವಾರ ಮಧ್ಯಾಹ್ನ ಸಾವನ್ನಪ್ಪಿದೆ ಎಂದು ಬನ್ನೇರುಘಟ್ಟ ಜೈವಿಕ‌ ಉದ್ಯಾನವನದ ಕಾರ್ಯ ನಿರ್ವಾಹಕ‌ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Giraffe dies
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು

ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ಆಕಸ್ಮಿಕವಾಗಿ ಚಿಕಿತ್ಸಾ ಪ್ರದೇಶವನ್ನು ಪ್ರವೇಶಿಸಿದ ಜಿರಾಫೆಯ ಉದ್ದನೆಯ ಕತ್ತು ಸಿಲುಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.