ETV Bharat / city

ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್

author img

By

Published : Jul 11, 2022, 10:11 PM IST

ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್
ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್

ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ, ನನ್ನ ಭೇಟಿಗೆ ಯಾರೂ ಬರಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್​​ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರಿದ್ದಾರೆ.

(ಇದನ್ನೂ ಓದಿ: ಜೀವದ ಉಳಿವಿಗೆ ಜೀರೋ ಟ್ರಾಫಿಕ್​.. ಮುಸ್ಲಿಂ ಯುವಕನ ಹೃದಯ ಬಡಿತಕ್ಕೆ ಚಾಲನೆ ನೀಡಿದ ಹಿಂದೂ ಬಾಲಕಿ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.